ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ಕ್ವಿಂಟಾಲ್ ರಾಗಿಗೆ 3846 ರೂಪಾಯಿ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ. ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು, ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಕಾರ್ಯಕ್ಕೆ ನಿಗದಿತ ಸ್ಥಳಗಳನ್ನು ಗುರ್ತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ನೋಂದಣಿಗೆ ಯಾವುದೇ ಸಮಸ್ಯೆ ಆಗದಂತೆ ಕಂಪ್ಯೂಟರ್ ಗಳು, ಇಂಟರ್ನೆಟ್ ವ್ಯವಸ್ಥೆ ಸೇರಿದಂತೆ ಅಗತ್ಯ ಸಿಬ್ಬಂದಿ ನಿಯೋಜಿಸಿ. ರೈತರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಹೇಳಿದರು. ರೈತರಿಂದ ಖರೀದಿಸಿದ ಧಾನ್ಯಗಳನ್ನು ಕ್ರೋಢೀಕರಿಸಿ ಶೇಖರಿಸಲು ಗೋದಾಮಗಳ ಗುಣಮಟ್ಟ ಪರಿಶೀಲಿಸಿ ಎಂದರು.
2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರು ಬೆಳೆದಿರುವ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ದತ್ತಾಂಶದಲ್ಲಿ ರೈತರು ನೋಂದಾಯಿಸಿಕೊಂಡು, ಐಡಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಹೇಳಿದರು.
ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿ ಜಿ. ಗಿರಿಜಾದೇವಿ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಎಸ್.ಆರ್ ರಮೇಶ್, ದೊಡ್ಡಬಳ್ಳಾಪುರ ಎ.ಪಿ.ಎಂ.ಸಿ ಕಾರ್ಯದರ್ಶಿ ಅಂಜುಂ, ಆಹಾರ ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕಿ ಶೋಭ ಹೆಚ್.ಟಿ, ತಾಲ್ಲೂಕು ಆಹಾರ ಶಿರಸ್ತೇದಾರರು ಹಾಗೂ ನಿರೀಕ್ಷಕರು , ಸಿಬ್ಬಂದಿ ಉಪಸ್ಥಿತರಿದ್ದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…