ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ:ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ಕ್ವಿಂಟಾಲ್ ರಾಗಿಗೆ 3846 ರೂಪಾಯಿ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ. ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು, ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಕಾರ್ಯಕ್ಕೆ ನಿಗದಿತ ಸ್ಥಳಗಳನ್ನು ಗುರ್ತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ನೋಂದಣಿಗೆ ಯಾವುದೇ ಸಮಸ್ಯೆ ಆಗದಂತೆ ಕಂಪ್ಯೂಟರ್ ಗಳು, ಇಂಟರ್ನೆಟ್ ವ್ಯವಸ್ಥೆ ಸೇರಿದಂತೆ ಅಗತ್ಯ ಸಿಬ್ಬಂದಿ ನಿಯೋಜಿಸಿ. ರೈತರಿಗೆ ಮೂಲಭೂತ ಸೌಕರ್ಯಗಳನ್ನು  ಕಲ್ಪಿಸಿ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಹೇಳಿದರು. ರೈತರಿಂದ ಖರೀದಿಸಿದ ಧಾನ್ಯಗಳನ್ನು ಕ್ರೋಢೀಕರಿಸಿ  ಶೇಖರಿಸಲು ಗೋದಾಮಗಳ ಗುಣಮಟ್ಟ ಪರಿಶೀಲಿಸಿ ಎಂದರು.

2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರು ಬೆಳೆದಿರುವ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ದತ್ತಾಂಶದಲ್ಲಿ ರೈತರು ನೋಂದಾಯಿಸಿಕೊಂಡು, ಐಡಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿ ಜಿ. ಗಿರಿಜಾದೇವಿ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಎಸ್.ಆರ್ ರಮೇಶ್, ದೊಡ್ಡಬಳ್ಳಾಪುರ ಎ‌.ಪಿ.ಎಂ.ಸಿ ಕಾರ್ಯದರ್ಶಿ ಅಂಜುಂ,  ಆಹಾರ ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕಿ ಶೋಭ ಹೆಚ್.ಟಿ, ತಾಲ್ಲೂಕು ಆಹಾರ ಶಿರಸ್ತೇದಾರರು ಹಾಗೂ ನಿರೀಕ್ಷಕರು , ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

42 minutes ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

3 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

3 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

5 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

10 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

1 day ago