ಡಿ.10ರಿಂದ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಪ್ರಾರಂಭ: ರೈತರಿಂದ ಪೂರ್ವ ಸಿದ್ಧತೆ: ಹೋರಿಗಳ ಮಾರಾಟ ಮತ್ತು ಪ್ರದರ್ಶನಕ್ಕೆ ದಿಬ್ಬ, ಶೆಡ್, ಪೆಂಡಾಲ್ ಗಳ ನಿರ್ಮಾಣ ಕಾರ್ಯದಲ್ಲಿ ರೈತ ನಿರತ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಡಿಸೆಂಬರ್ 25ಕ್ಕೆ ಜರುಗಲಿದೆ. ಇದಕ್ಕೂ ಮುನ್ನ ಡಿ.10ರಿಂದ ದನಗಳ ಜಾತ್ರೆ ಪ್ರಾರಂಭವಾಗಲಿದೆ. ಪ್ರತಿ ವರ್ಷದಂತೆ ಈ ವರ್ಷವೂ ಈಗಾಗಲೇ ಜಾತ್ರೆಗೆ ಬೇಕಾಗಿರುವ ಎಲ್ಲಾ ಸಿದ್ಧತಾ ಕಾರ್ಯಗಳು ಪ್ರಾರಂಭಗೊಂಡಿವೆ.

ಸದ್ಯ ದನಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಮೊದಲೇ ಸ್ಥಳಗಳನ್ನು ಗುರುತಿಸಿಕೊಂಡು ದಿಬ್ಬಗಳ ನಿರ್ಮಾಣ ಮತ್ತು ಶೆಡ್ ಗಳು, ಪೆಂಡಲ್ ನಿರ್ಮಾಣ ಕೆಲಸವನ್ನ ರೈತರು ಪ್ರಾರಂಭಿಸಿದ್ದಾರೆ.

ಮುಂಗಾರಿನಲ್ಲಿ ಮಳೆ ಆಶ್ರಯದಲ್ಲಿ ಬೆಳೆಯಲಾಗುವ ಬೆಳೆಗಳ ಕೊಯ್ಲು ಮುಕ್ತಾಯವಾದ ನಂತರ ಪ್ರಥಮ ಬಾರಿಗೆ ನಡೆಯುವ ಘಾಟಿ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಕೃಷಿ ಕೆಲಸಕ್ಕೆ ಬೇಕಾಗುವ ಹೋರಿಗಳನ್ನು ಖರೀದಿಸಲು ರಾಜ್ಯದ ಬಳ್ಳಾರಿ, ದಾವಣಗೆರೆ, ರಾಯಚೂರು, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯದ ತಮಿಳುನಾಡಿನ ಸೇಲಂ, ಹೊಸೂರು, ಆಂಧ್ರಪ್ರದೇಶದ ಹಿಂದೂಪುರ, ಅನಂತಪುರ, ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಸೇರಿದಂತೆ ವಿವಿಧ ಕಡೆಗಳಿಂದಲು ರೈತರು ಬರುತ್ತಾರೆ.

ಜಾತ್ರೆಯಲ್ಲಿ ಅಮೃತ್ ಮಹಲ್, ಹಳ್ಳಿಕಾರ್ ಸೇರಿದಂತೆ ಸ್ಥಳೀಯ ನಾಟಿ ಹೋರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಕ್ಕೆ ಬರುತ್ತವೆ. ಹೀಗಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಹೊರ ಜಿಲ್ಲೆ, ಹೊರ ರಾಜ್ಯದ ರೈತರು ಕೃಷಿ ಕೆಲಸಗಳಿಗೆ ಹೋರಿಗಳ ಖರೀದಿಗೆ ಬರುತ್ತಾರೆ.

*ಡಿಸೆಂಬರ್ 25 ಕ್ಕೆ ಬ್ರಹ್ಮರಥೋತ್ಸವ*

ಶ್ರೀ ಘಾಟಿ ಸುಬ್ರಮಣ್ಯರವರ ಬ್ರಹ್ಮರಥೋತ್ಸವ ಡಿಸೆಂಬರ್ 25 ರಂದು ನಡೆಯಲಿದೆ. ಈ ಬಾರಿ ವಿಶೇಷವಾಗಿ ಪುಷ್ಪಲಂಕಾರ ದೀಪ ಅಲಂಕಾರಗಳಿರುತ್ತದೆ. ಭಕ್ತಾದಿಗಳ ಅನುಕೂಲಕ್ಕೆ ಕುಡಿಯುವ ನೀರಿನ ವ್ಯವಸ್ಥೆ, ಕ್ಯೂಲೈನ್ ವ್ಯವಸ್ಥೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಲಾಗುತ್ತಿದೆ.

*ಸುಂಕ ರಹಿತ ಜಾತ್ರೆ*

ಈ ಬಾರಿಯ ಘಾಟಿ ಜಾತ್ರೆಯಲ್ಲಿ ಜಾನುವಾರುಗಳಿಗೆ ಹಾಗೂ ಬರುವಂತಹ ಭಕ್ತಾದಿಗಳ ವಾಹನಗಳಿಗೆ ಸುಂಕ ಇರುವುದಿಲ್ಲ. ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ, ಗರ್ಭಿಣಿ ಬಾಣಂತಿಯರಿಗೆ ನೇರವಾಗಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ.

*ಡಿ.10 ರಿಂದ 18 ವರೆಗೆ ರಾಸುಗಳ ಜಾತ್ರೆ*

ಡಿಸೆಂಬರ್ 10 ರಿಂದ 18 ರವರೆಗೆ ರಾಸುಗಳ ಜಾತ್ರೆ ನಡೆಯಲಿದೆ ರಾಸುಗಳ ಜಾತ್ರೆ ಸಮಯದಲ್ಲಿ ವಿಶೇಷ ದೀಪಾಲಂಕಾರ, ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ ಕಲ್ಪಿಸಲಾಗುವುದು. ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ಕಲ್ಪಿಸಲಾಗುವುದು ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ಹೇಳಿದ್ದಾರೆ.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

2 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

7 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

10 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

12 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago