ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಾಧುಮಠ ಗ್ರಾಮದ ರಸ್ತೆ ಬದಿಯ ಮೋರಿಯೊಂದರ ಹಳ್ಳದಲ್ಲಿ ಬೈಕ್ ಸಮೇತ ಬಾಲಕನ ಶವ ಪತ್ತೆಯಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿ ನಿವಾಸಿ ನಿಶಾಂಕ್ ಎನ್ (15) ಮೃತ ಬಾಲಕನಾಗಿದ್ದು, ಈತ ಚಿಕ್ಕಬಳ್ಳಾಪುರ ನಗರದ ಬೆಸ್ಟ್ ಪಿಯುಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ.

ಇಂದು ಸಾಧು ಮಠ ಗ್ರಾಮದ ರಸ್ತೆ ಬದಿಯ ಮೋರಿಯಲ್ಲಿ ಬಾಲಕನ ಮೃತದೇಹ ಕೊಳತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಬೈಕ್ ಸಹ ಹಳ್ಳದಲ್ಲಿ ಬಿದ್ದಿದೆ.

ಮಗನ ಸಾವಿನ ಸುದ್ದಿ ಕೇಳಿ ತಂದೆ ಹಾಗೂ ತಾಯಿ ಇಬ್ಬರೂ ಆಘಾತಕ್ಕೊಳಗಾಗಿದ್ದು, ಕಣ್ಣೀರು ಸುರಿಸುತ್ತಿದ್ದಾರೆ. ಇನ್ನು ಘಟನೆ ಬಗ್ಗೆ ಮಾತನಾಡಿರುವ ತಾಯಿ ಹಾಗೂ ತಂದೆ, ಡಿಸೆಂಬರ್ 15 ರಂದು ನನ್ನ ಮಗನಿಗೆ ಹುಷಾರ್ ಇಲ್ಲದ ಕಾರಣ ಕಾಲೇಜಿಗೆ ಹೋಗದೇ ಮನೆಯಲ್ಲಿ ಇದ್ದ. ಮಗನಿಗೆ ಸ್ನಾನ ಮಾಡಿಕೊ ಅಂತ ಹೇಳಿದೆ. ಅದಾದ್ಮೇಲೆ ಬೆಳಗ್ಗೆ 7:30 ಗಂಟೆಗೆ ಊರ ಒಳಗೆ ಹೋಗಿ ಬರ್ತೀನಿ ಅಂತ ಹೇಳಿ ಹೋದವನು ಸಂಜೆಯಾದರೂ ಮನೆಗೆ ಬರಲಿಲ್ಲ. ನಂತರ ಮಗನಿಗೆ ಫೋನ್‌ ಮಾಡಿದರೆ ಸ್ವಿಚ್‌ ಆಫ್‌ ಅಂತ ಬಂತು.

ನಂತರ ಸ್ನೇಹಿತರನ್ನ ವಿಚಾರಣೆ ಮಾಡಿದೆವು ಹಾಗೂ ಸಂಬಂಧಿಕರ ಮನೆಯಲ್ಲಿ ಫೋನ್ ಮಾಡಿ ವಿಚಾರಿಸಲಾಗಿ ಅಲ್ಲಿಗೂ ಸಹ ಹೋಗಿರಲಿಲ್ಲ. ನಮಗೆ ನಮ್ಮ ಪಕ್ಕದ ಮನೆಯವರ ದ್ವಿಚಕ್ರ ವಾಹನ ತೆಗೆದುಕೊಂಡು ಹೋಗಿದ್ದ ಅಂತ ತಿಳಿದು ಬಂತು. ಆದ್ದರಿಂದ ಕಾಣೆಯಾಗಿರುವ ನನ್ನ ಮಗನನ್ನ ಪತ್ತೆ ಮಾಡಿಕೊಡಬೇಕೆಂದು ಡಿ.16ರಂದು ಮಹಿಳಾ ಠಾಣೆಯಲ್ಲಿ ನಾವು ದೂರು ನೀಡಿದ್ದೆವು. ಆದರೆ ಇಂದು ನಮ್ಮ ಮಗ ಶವವಾಗಿ ಪತ್ತೆಯಾಗಿದ್ದಾನೆ. ಇದು ಅಪಘಾತ ಅಲ್ಲ, ಉದ್ದೇಶಪೂರ್ವಕವಾಗಿಯೇ ನಮ್ಮ ಮಗನನ್ನು ಯಾರೋ ಕೊಲೆ ಮಾಡಿರಬಹುದು ಎಂದು ಆರೋಪಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರು ಘಟನಾ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸಹ ಭೇಟಿ ಮಾಡಿ ಪರಿಶೀಲನೆ ನಡೆಸುತ್ತಿದೆ. ಪೊಲೀಸರ ಸಂಪೂರ್ಣ ತನಿಖೆಯಿಂದ ಇದು ಅಪಘಾತವೋ ಇಲ್ಲ ಕೊಲೆಯೋ ಎಂಬುದು ತಿಳಿದು ಬರಬೇಕಿದೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

10 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

14 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

16 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

16 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

18 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

22 hours ago