ಪ್ರತಿಯೊಬ್ಬರಿಗೂ ಭಾರತ ಸಂವಿಧಾನ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅರಿವು ಇರಲೇಬೇಕು. ಈ ನಿಟ್ಟಿನಲ್ಲಿ ಸಂವಿಧಾನದ ಆಶಯಗಳು, ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳು ಪ್ರತಿಯೊಂದು ಮನೆಮನೆಗೂ ತಲುಪಿಸುವ ಕೆಲಸ ನಿರಂತರವಾಗಿ ನಾವೆಲ್ಲರೂ ಮಾಡಬೇಕಾಗಿದೆ ಎಂದು ದಲಿತ ಮುಖಂಡ ರಾಜು ಸಣ್ಣಕ್ಕಿ ಹೇಳಿದರು.
ಈ ಕುರಿತು ನಗರದ ಪ್ರವಾಸ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನಿನ ಅರಿವು ಇದ್ದರೆ ಅನ್ಯಾಯ, ಮೋಸ, ದಬ್ಬಾಳಿಕೆ ಸೇರಿದಂತೆ ಇತರೆ ತೊಂದರೆಗಳಿಂದ ಪಾರಾಗಬಹುದು ಎಂದರು.
ನಂತರ ವಿದ್ಯಾರ್ಥಿನಿ ನಂದಿನಿ ಮಾತನಾಡಿ, ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನ ಆಳವಾಗಿ ಅಧ್ಯಯನ ಮಾಡಬೇಕು. ಅವರ ವಿಚಾರಧಾರೆಗಳನ್ನ ಯುವಮನಸ್ಸುಗಳು ಅರಿತುಕೊಂಡು ಇತರರಿಗೆ ಜಾಗೃತಿ ಮೂಡಿಸಬೇಕು ಎಂದರು.
ಭಾರತದ ಪಾಲಿಗೆ ಸಂವಿಧಾನವೇ ಧರ್ಮ, ಸಂವಿಧಾನ ಪುಸ್ತಕವೇ ಧರ್ಮಗ್ರಂಥ. ಸಂವಿಧಾನ ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ, ಧರ್ಮಗಳ ಗ್ರಂಥಗಳಿಲ್ಲದೆ ನಾವು ಬದುಕಬಹುದು ಆದರೆ ಸಂವಿಧಾನ ಇಲ್ಲದೆ ಬದುಕಲು ಆಗುವುದಿಲ್ಲ. ದೇಶದ ಪ್ರತಿಯೊಬ್ಬನಿಗೂ ಮೂಲಭೂತ ಹಕ್ಕುಗಳಾಗಿ ಸ್ವಾತಂತ್ರ್ಯ, ಸಮಾನತೆ, ಶೋಷಣೆ ವಿರುದ್ಧದ ಹಕ್ಕು, ಧಾರ್ಮಿಕ ಸ್ವಾತಂತ್ರ್ಯ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮತ್ತು ಸಾಂವಿಧಾನಿಕ ಪರಿಹಾರದ ಹಕ್ಕುಗಳನ್ನು ನೀಡಲಾಗಿದೆ. ಇಲ್ಲಿ ಯಾರೊಬ್ಬರೂ ಕೀಳಲ್ಲ, ಮೇಲೂ ಅಲ್ಲ ಎಂದರು.
ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಅಂಬೇಡ್ಕರ್ ಮತ್ತು ಸಂವಿಧಾನ ಕುರಿತು ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಡಿ.17ರ ಭಾನುವಾರ ಬೆಳಗ್ಗೆ 11ಕ್ಕೆ ದೊಡ್ಡಬಳ್ಳಾಪುರ ನಗರದ ಕೆಎಸ್ ಆರ್ ಟಿಸಿ ಡಿಪೋ ಮುಂಭಾಗದಲ್ಲಿರುವ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ ಎಂದು ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟದ ಮುಖಂಡ ಹೇಮಂತ್ ಕುಮಾರ್.ಎಂ ಹೇಳಿದರು.
ವಿದ್ಯಾರ್ಥಿ ಹಾಗೂ ಯುವಜನರಿಗೆ ಸಂವಿಧಾನದ ಮಹತ್ವ ಮತ್ತು ಅನಿವಾರ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ದಲಿತ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾ ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಯನ್ನ ಆಯೋಜನೆ ಮಾಡಲಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಹೊಸಕೊಟೆ, ದೊಡ್ಡಬಳ್ಳಾಪುರ, ನೆಲಮಂಗಲ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.
ನಿಬಂದನೆಗಳು:
ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವವರು ನೋಂದಣಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗೆ ತಮ್ಮ ಕಾಲೇಜು ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಗಳನ್ನು ಮುಂಚಿತವಾಗಿ ವಾಟ್ಸಾಪ್ ಮೂಲಕ ಕಳುಹಿಸಬೇಕು.
ಸ್ಪರ್ಧೆಯಲ್ಲಿ ಭಾಗವಹಿಸಲು ಬರುವಾಗ ತಮ್ಮ ಕಾಲೇಜು ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಖಡ್ಡಾಯವಾಗಿ ತರಬೇಕು.
ಬರಹ ಸ್ಪಷ್ಟ ಮತ್ತು ತೀಕ್ಷವಾಗಿರಬೇಕು, ವಿಷಯದ ಕುರಿತು 5 ಪುಟಗಳು ಮೀರದಂತೆ ಪ್ರಬಂಧ ಬರೆಯಬೇಕು.
ಆಸಕ್ತರು ಮೊದಲೇ ಕರೆಮಾಡಿ ತಮ್ಮ ಹೆಸರುಗಳನ್ನು ಡಿ.15ರೊಳಗಾಗಿ ನೋಂದಾಯಿಸಿಕೊಳ್ಳಬೇಕು.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಡಿ.27 ರಂದು ನಡೆಯುವ ಸಂಘಟನೆಯ ಜಿಲ್ಲಾ ಸಮ್ಮೇಳನದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು.
ಪ್ರಥಮ ಬಹುಮಾನ: 10000, ದ್ವಿತಿಯ ಬಹುಮಾನ: 5000, ತೃತಿಯ ಬಹುಮಾನ: 3000 ನೀಡಲಾಗುವುದು.ಹಾಗೂ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಸಮಾದಾನಕರ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ನೊಂದಣಿಗಾಗಿ 9986355926 ಸಂಖ್ಯೆಗೆ ಕರೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ 9900735150, 9845076730, 9449463866, 9535418449, 7975325014, 9620649680, 9986573503
ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.
ನೋಂದಣಿಗಾಗಿ ಈ ಕೆಳಗಿನ ಲಿಂಕ್ ಬಳಸಿ
https://forms.gle/wBUDUegUx6Sx6fSX7
ಈ ವೇಳೆ ವರ್ಷ, ಅಪ್ಪುರಾಜ್, ಮಾನಸ ಉಪಸ್ಥಿತರಿದ್ದರು.