ಡಿ.17ರಂದು ಸೌಹಾರ್ದ ಕ್ರಿಕೆಟ್ ಕಪ್: ನಗರದ ಭಗತ್ ಸಿಂಗ್ ಮೈದಾನದಲ್ಲಿ ಆಯೋಜನೆ

ದೊಡ್ಡಬಳ್ಳಾಪುರ: ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ( RDPR) ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪತ್ರಕರ್ತರ ಸಹಭಾಗಿತ್ವದಲ್ಲಿ ಡಿ.17ರಂದು ನಗರದ ಭಗತ್ ಸಿಂಗ್ ಮೈದಾನದಲ್ಲಿ 2023-24ನೇ ಸಾಲಿನ ಸೌಹಾರ್ದ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ.

ಬೆಳಗ್ಗೆ 8ಕ್ಕೆ ಕ್ರಿಕೆಟ್ ಟೂರ್ನಮೆಂಟ್ ಗಣ್ಯರಿಂದ ಉದ್ಘಾಟನೆಗೊಳ್ಳಲಿದೆ. ಕ್ರಿಕೆಟ್ ಟೂರ್ನಮೆಂಟ್ ಗೆದ್ದ ತಂಡಕ್ಕೆ ಬಹುಮಾನ‌ ನೀಡಿ ಗೌರವಿಸಲಾಗುವುದು, ಎಲ್ಲರಿಗೂ ಉಪಹಾರ ವ್ಯವಸ್ಥೆ ಮಾಡಲಾಗಿರುತ್ತದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎಂ.ಶ್ರೀನಿವಾಸ್, ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ತಾ.ಪಂ ಇಒ ಎನ್.ಮುನಿರಾಜ್, ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ವಕೀಲ ಪ್ರತಾಪ್ ಸೇರಿದಂತೆ ಇತರರು ಭಾಗಿಯಾಗಲಿದ್ದಾರೆ.

ಸಾರ್ವಜನಿಕರು, ಕ್ರೀಡಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ‌ ಭಾಗವಹಿಸಿ ಟೂರ್ನಮೆಂಟ್ ಗೆ ಮೆರಗು ತರಬೇಕೆಂದು ಸವಿನಯ ಪ್ರಾರ್ಥನೆ.

Ramesh Babu

Journalist

Recent Posts

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

3 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

5 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

5 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

7 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

11 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

23 hours ago