ಡಿ.19 ರಂದು ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ- ಶಾಸಕ ಧೀರಜ್ ಮುನಿರಾಜು

ಡಿಸೆಂಬರ್ 19 ರಂದು ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ತಾಲೂಕು ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಂಡು ಸದುಪಯೋಗಪಡಿಸಿಕೊಳ್ಳಬೇಕು ಎಂದು ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಕೇಂದ್ರ ಹಾಗೂ ದೊಡ್ಡಬಳ್ಳಾಪುರ ಕೈಗಾರಿಕಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ತಾಲ್ಲೂಕು ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೇಳದಲ್ಲಿ ವಿವಿಧ ಪ್ರತಿಷ್ಠಿತ ಕಂಪನಿ, ಕೈಗಾರಿಕಾ ಘಟಕ ಮತ್ತು ಗಾರ್ಮೆಂಟ್ಸ್ ಭಾಗವಹಿಸಲಿವೆ.ಯುವನಿಧಿ ಫಲಾನುಭವಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಎಸ್ ಎಸ್ ಎಲ್ ಸಿ, ಡಿಪ್ಲೋಮಾ, ಐಟಿಐ, ಪಿಯುಸಿ, ಪದವಿ, ಎಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅನಕ್ಷರಸ್ಥರು ಮತ್ತು ವಿಶೇಷಚೇತನರು ಕೂಡ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಕಾರ್ಖಾನೆಗಳ ಉಪನಿರ್ದೇಶಕರಾದ ಎಂ.ಎ. ಸೋಮಶೇಖರ್, ಜಿಲ್ಲಾ ಕೌಶಲ್ಯ ಅಧಿಕಾರಿ ಜಗನ್ನಾಥ್, ದೊಡ್ಡಬಳ್ಳಾಪುರ ಕೈಗಾರಿಕಾ ಸಂಸ್ಥೆ ಅಧ್ಯಕ್ಷರಾದ ಅಂಜನೇಯಲು, ದೊಡ್ಡಬಳ್ಳಾಪುರ ಪೌರಾಯುಕ್ತ ಅಧಿಕಾರಿ ಕಾರ್ತಿಕ್ , ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ದೊಡ್ಡಬಳ್ಳಾಪುರ ಇಒ ಮಂಜುನಾಥ್, ಕಾರ್ಖಾನೆ ಮತ್ತು ಗಾರ್ಮೆಂಟ್ಸ್ ನ ಮುಖ್ಯಸ್ಥರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!