ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ….

ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಈಗಾಗಲೇ ಸಂಬಂಧಪಟ್ಟ ಇಲಾಖೆಗಳ ವತಿಯಿಂದ ಸಕಲ ಸಿದ್ಧತೆ ನಡೆಸಿಕೊಳ್ಳಲಾಗಿದೆ.

ಪೂಜೆ ಪ್ರಾರಂಭ ಸಮಯ

ಡಿ.25ರ ಗುರುವಾರದಂದು ಪ್ರಾತಃ ಕಾಲ 2:00 ಗಂಟೆಗೆ ದೇವಾಲಯ ತೆರೆಯಲಾಗುವುದು, 2:30 ಗಂಟೆಗೆ ದೇವರಿಗೆ ಅಭಿಷೇಕ ಪ್ರಾರಂಭವಾಗಿ ಬೆಳಗ್ಗೆ 4:30 ಗಂಟೆಗೆ ಮಹಾ ಮಂಗಳಾರತಿ ನೆರವೇರುವುದು, ಬೆಳಗ್ಗೆ 5:00 ರಿಂದ 6:00 ಗಂಟೆಗಳವರೆಗೆ ಸ್ಥಳೀಯರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 6 ಗಂಟೆ ನಂತರ ಭಕ್ತಾಧಿಗಳಿಗಾಗಿ ಧರ್ಮ ದರ್ಶನ ಮತ್ತು ರೂ. 50 ರ ವಿಶೇಷ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ.

ಸಾರಿಗೆ ವ್ಯವಸ್ಥೆ

ರಥೋತ್ಸವ ದಿನದಂದು ಘಾಟಿಗೆ ಬರುವ ಭಕ್ತಾಧಿಗಳಿಗಾಗಿ ದೊಡ್ಡಬಳ್ಳಾಪುರದ ಬಳಿ ಕಂಟನಕುಂಟೆಯಿಂದ 15 ಮತ್ತು ಮಾಕಳಿಯಿಂದ 10 ಉಚಿತ ಬಸ್ (KSRTC) ಗಳನ್ನು ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ (ಈ ಸ್ಥಳಗಳಲ್ಲಿ 04 ಮತ್ತು 02 ಚಕ್ರ ವಾಹನಗಳಿಗೆ ಉಚಿತ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ.

ಸುಂಕ ವಿನಾಯಿತಿ

1/12/2025 ರಿಂದ 31/01/2026 ರವರಗೆ ಶ್ರೀ ಕ್ಷೇತ್ರಕ್ಕೆ ಬರುವ ವಾಹನಗಳಿಗೆ ಸುಂಕ ವಿನಾಯಿತಿ ನೀಡಲಾಗಿರುತ್ತದೆ.

ಪೊಲೀಸ್ ಬಂದೋಬಸ್ತ್

ಭಕ್ತಾಧಿಗಳ ಭದ್ರತೆ ಮತ್ತು ಸಂಚಾರ ಸುಗಮ ವ್ಯವಸ್ಥೆಗಾಗಿ ಸುಮಾರು 700 ಜನ ಪೋಲಿಸ್ ಸಿಬ್ಬಂದಿ ಮತ್ತು 200 ಮಂದಿ ಗೃಹ ರಕ್ಷಕ ಸಿಬ್ಬಂದಿ(Home Guard) ಶ್ರೀ ಕ್ಷೇತ್ರಕ್ಕೆ ನಿಯೋಜಿಸಲಾಗಿರುತ್ತದೆ.

ಸಿಸಿ ಟಿವಿ ಅಳವಡಿಕೆ

ಸರಗಳ್ಳತನ, ಜೇಬುಗಳ್ಳತನ ಹಾಗೂ ಯಾವುದೇ ಅವಘಡಗಳು ನಡೆಯದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಕ್ಷೇತ್ರದ 1 ಕಿ.ಮೀ. ಸುತ್ತಳತೆಯಲ್ಲಿ ಸುಮಾರು 80 ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸಿ ಕಣ್ಗಾವಲು ಇರಿಸಲಾಗಿರುತ್ತದೆ.

ಉಚಿತ ಅನ್ನ ದಾಸೋಹ

ಬ್ರಹ್ಮರಥೋತ್ಸವ ದಿನದಂದು ಬೆಳಗ್ಗೆ 6ರಿಂದ ರಾತ್ರಿ 8:30ರವರೆಗೆ ಎಲ್ಲಾ ಭಕ್ತಾಧಿಗಳಿಗೂ ಉಚಿತ ಅನ್ನ ದಾಸೋಹ ವ್ಯವಸ್ಥೆ ಮಾಡಲಾಗಿರುತ್ತದೆ.

ದೇವರ ದರ್ಶನಕ್ಕೆ ಕ್ಯೂ ಸಿಸ್ಟಮ್ 

ಭಕ್ತಾಧಿಗಳಿಗೆ ಸುಗಮ ದರ್ಶನದ ವ್ಯವಸ್ಥೆಗಾಗಿ ಧರ್ಮ ದರ್ಶನ ಮತ್ತು ರೂ. 50ಗಳ ವಿಶೇಷ ದರ್ಶನದ ಕ್ಯೂ ಲೈನ್‌ ಅನ್ನು ಮಾಡಿಸಲಾಗಿರುತ್ತದೆ. (ಕ್ಯೂ ಲೈನ್‌ ನಲ್ಲಿರುವ ಭಕ್ತಾಧಿಗಳಿಗೆ ನೆರಳು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿರುತ್ತದೆ).

ವೈದ್ಯಕೀಯ ಸೇವೆ

ತುರ್ತು ಸೇವೆಗಳ ನಿಮಿತ್ತ 3 ಆಂಬುಲೆನ್ಸ್ ವಾಹನಗಳನ್ನು ಮತ್ತು ಆರೋಗ್ಯ ಇಲಾಖೆ ತಂಡವನ್ನು ಹಾಗೂ ಅಗ್ನಿ ಶಾಮಕ ವಾಹನದ ವ್ಯವಸ್ಥೆ ಮಾಡಲಾಗಿರುತ್ತದೆ.

ದೀಪಾಲಂಕಾರ

ಡಿ.23ರಿಂದ ಡಿ.28ರವರೆಗೆ ಶ್ರೀಕ್ಷೇತ್ರದಲ್ಲಿ ವಿಶೇಷ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿರುತ್ತದೆ.

ಆಯ್ದ ವ್ಯಕ್ತಿಗಳಿಗೆ ನೇರ ದೇವರ ದರ್ಶನ

ಹಿರಿಯ ನಾಗರೀಕರು, ವಿಶೇಷ ಚೇತನರು, ಗರ್ಭಿಣಿಯರು ಮತ್ತು 01 ವರ್ಷದ ಒಳಗಿನ ಶಿಶುವಿನೊಂದಿಗೆ ಬರುವ ಸ್ತ್ರೀಯರಿಗೆ ನೇರ ದರ್ಶನದ ವ್ಯವಸ್ಥೆಗಾಗಿ Buggis ಗಳ ವ್ಯವಸ್ಥೆ ಮಾಡಲಾಗಿರುತ್ತದೆ.

ಸಾರ್ವಜನಿಕ ಸ್ಥಳಗಳಲ್ಲಿ ಭಕ್ತಾಧಿಗಳು/ ಸಾರ್ವಜನಿಕರ ಉಪಯೋಗಕ್ಕಾಗಿ Mobile ಶೌಚಾಲಯಗಳ ವ್ಯವಸ್ಥೆ ಮಾಡಲಾಗಿರುತ್ತದೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧಾ ಅಧಿಕಾರ ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ಎನ್. ಅನುರಾಧಾ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ…

17 minutes ago

ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆ- ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು…

8 hours ago

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ: ಮದುವೆ ಫೋಟೋಸ್ ವೈರಲ್

ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ…

18 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ: ನೂತನ‌ ಜಿಲ್ಲಾಧಿಕಾರಿ ಯಾರು ಗೊತ್ತಾ….?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್‌ ಆದೇಶಿಸಿದ್ದಾರೆ. ಎ.ಬಿ.…

19 hours ago

ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ ಸಂಪನ್ನ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ಶ್ರದ್ಧಾಭಕ್ತಿಯಿಂದ, ವಿಜೃಂಭಣೆಯಿಂದ ನೆರವೇರಿಸಲಾಯಿತು. ಪ್ರತಿವರ್ಷದಂತೆ ಈ…

24 hours ago

ಇಂದು ಇತಿಹಾಸ ಪ್ರಸಿದ್ಧ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ: ಮುಂಜಾನೆಯಿಂದಲೇ ಆರಂಭಗೊಂಡ ವಿಶೇಷ ಪೂಜೆ, ಪುನಸ್ಕಾರ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು…

1 day ago