ನಗರದ ಒಕ್ಕಲಿಗರ ಭವನದಲ್ಲಿ ಡಿ.25 ರಂದು 2024ರ ನೂತನ ವರ್ಷದ ದಿನಚರಿ (ಕ್ಯಾಲೆಂಡರ್) ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ತಾಲ್ಲೂಕಿನ ನಗರ ಭಾಗದ ಒಕ್ಕಲಿಗರ ಭವನದಲ್ಲಿ ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ತಾಲ್ಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಪಕ್ಷದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಲು ದೊಡ್ಡಬಳ್ಳಾಪುರ ಜೆಡಿಎಸ್ ಪಕ್ಷ ಸಿದ್ದತೆ ನಡೆಸಲಾಗುತ್ತಿದೆ ಎಂದು ಹೇಳಿದರು.
ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಪ್ರಬಲವಾಗಿದ್ದು ವಿಧಾನ ಸಭಾ ಚುನಾವಣಾ ಸಂದರ್ಭಗಳಲ್ಲಿ ಕೆಲ ಸಮಸ್ಯೆಗಳಿಂದ ಹಿನ್ನಡೆಯಾಗುತ್ತಿದೆ ಮುಂದೆ ಈ ರೀತಿಯ ಸಮಸ್ಯೆಗಳು ಎದುರಾಗದಂತೆ ಕಾರ್ಯ ನಿರ್ವಹಿಸಲು ನಮ್ಮ ಪಕ್ಷದ ಮುಖಂಡರು ಮುಂದಾಗಿದ್ದೇವೆ ಎಂದರು.
ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಚೈತನ್ಯ ತುಂಬಲು ಹಾಗೂ ತಾಲ್ಲೂಕಿನ ಸಮಸ್ಯೆಗಳ ಪರಿಹಾರಕ್ಕೆ ತಾಲ್ಲೂಕಿನ ಜನತೆಯ ಬೆಂಬಲಕ್ಕೆ ನಾವು ಸದಾ ಸಿದ್ಧರಿದ್ದೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ, ಜೆಡಿಎಸ್ ಮುಖಂಡರಾದ ತ.ನಾ ಪ್ರಭುದೇವ್, ಎ.ನರಸಿಂಹಯ್ಯ, ಆನಂದ್, ಪ್ರವೀಣ್ ಶಾಂತಿನಗರ, ತಳವಾರ್ ನಾಗಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…