ಡಿ.25 ರಂದು 2024ರ ನೂತನ ವರ್ಷದ ದಿನಚರಿ (ಕ್ಯಾಲೆಂಡರ್) ಬಿಡುಗಡೆ- ಪಕ್ಷದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಲು ಸಿದ್ಧತೆ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಗರದ ಒಕ್ಕಲಿಗರ ಭವನದಲ್ಲಿ ಡಿ.25 ರಂದು 2024ರ ನೂತನ ವರ್ಷದ ದಿನಚರಿ (ಕ್ಯಾಲೆಂಡರ್) ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ತಾಲ್ಲೂಕಿನ ನಗರ ಭಾಗದ ಒಕ್ಕಲಿಗರ ಭವನದಲ್ಲಿ ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ತಾಲ್ಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಪಕ್ಷದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಲು ದೊಡ್ಡಬಳ್ಳಾಪುರ ಜೆಡಿಎಸ್ ಪಕ್ಷ ಸಿದ್ದತೆ ನಡೆಸಲಾಗುತ್ತಿದೆ ಎಂದು ಹೇಳಿದರು.

ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಪ್ರಬಲವಾಗಿದ್ದು ವಿಧಾನ ಸಭಾ ಚುನಾವಣಾ ಸಂದರ್ಭಗಳಲ್ಲಿ ಕೆಲ ಸಮಸ್ಯೆಗಳಿಂದ ಹಿನ್ನಡೆಯಾಗುತ್ತಿದೆ ಮುಂದೆ ಈ ರೀತಿಯ ಸಮಸ್ಯೆಗಳು ಎದುರಾಗದಂತೆ ಕಾರ್ಯ ನಿರ್ವಹಿಸಲು ನಮ್ಮ ಪಕ್ಷದ ಮುಖಂಡರು  ಮುಂದಾಗಿದ್ದೇವೆ ಎಂದರು.

ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಚೈತನ್ಯ ತುಂಬಲು  ಹಾಗೂ ತಾಲ್ಲೂಕಿನ ಸಮಸ್ಯೆಗಳ ಪರಿಹಾರಕ್ಕೆ ತಾಲ್ಲೂಕಿನ ಜನತೆಯ ಬೆಂಬಲಕ್ಕೆ ನಾವು ಸದಾ ಸಿದ್ಧರಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ, ಜೆಡಿಎಸ್ ಮುಖಂಡರಾದ ತ.ನಾ ಪ್ರಭುದೇವ್, ಎ.ನರಸಿಂಹಯ್ಯ, ಆನಂದ್, ಪ್ರವೀಣ್ ಶಾಂತಿನಗರ, ತಳವಾರ್ ನಾಗಣ್ಣ  ಸೇರಿದಂತೆ ಇತರರು  ಉಪಸ್ಥಿತರಿದ್ದರು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

7 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

10 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

13 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

15 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

16 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago