Categories: ಕೋಲಾರ

ಡಿ.31 ರಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

ಕೋಲಾರ: ನೌಕರರಿಗೆ ಪರಿಷ್ಕೃತ ವೇತನ ಜಾರಿ, ‌ವೇತನ ಹಿಂಬಾಕಿ ಹಾಗೂ ನಿಗಮಗಳಿಗೆ ಶಕ್ತಿ ಯೋಜನೆ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದು, ಡಿ.31ರ ಬೆಳಿಗ್ಗೆ 6 ಗಂಟೆಯಿಂದಲೇ ಬಸ್‌ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ‌ ಜಂಟಿ ಕ್ರಿಯಾ ಸಮಿತಿ ಮುಖಂಡರು ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ರಾಜ್ಯ ಮುಖಂಡ ನಾರಾಯಣಸ್ವಾಮಿ, ‘ರಾಜ್ಯ ಸರ್ಕಾರವು ಸಾರಿಗೆ ನೌಕರರ 32 ಬೇಡಿಕೆಗಳನ್ನು ಈಡೇರಿಸಬೇಕಿದೆ. ಈ ಸಂಬಂಧ ಹಲವಾರು ಬಾರಿ ಮನವಿ ಮಾಡಿದರೂ ಸರ್ಕಾರ ಕ್ರಮ ವಹಿಸಿಲ್ಲ. ಸಾರಿಗೆ ಸಚಿವ ರಾಮಲಿಂಗಾರಡ್ಡಿ ಸ್ಪಂದಿಸಿಲ್ಲ. ಹೀಗಾಗಿ, ಅನಿವಾರ್ಯವಾಗಿ ಮುಷ್ಕರ ನಡೆಸಬೇಕಾಗಿದೆ. ಡಿ.31ರಿಂದ ಯಾವುದೇ ಸಾರಿಗೆ ಬಸ್‌ಗಳ ಸಂಚಾರ ಇರುವುದಿಲ್ಲ. ನಮ್ಮ ಸಮಸ್ಯೆ ಅರಿತು ಸಾರ್ವಜನಿಕರು ಸಹಕರಿಸಬೇಕು’ ಎಂದು ಕೋರಿದರು.

‘ಸಾರಿಗೆ ನೌಕರರು ಸರ್ಕಾರದ ಮಹಾತ್ವಕಾಂಕ್ಷಿ ಶಕ್ತಿ ಯೋಜನೆಯನ್ನು ಸಮರ್ಪಕವಾಗಿ ನಿಭಾಯಿಸಿದ್ದಾರೆ. ಆದರೆ, ಸಾರಿಗೆ ನಿಗಮಗಳಿಗೆ ಆ ಹಣ ಬಿಡುಗಡೆ ಮಾಡಿಲ್ಲ’ ಎಂದರು.

ಕ್ರಿಯಾ ಸಮಿತಿಯ ಪದಾಧಿಕಾರಿ ಬಾಲಕೃಷ್ಣ ಮಾತನಾಡಿ, ‘2020 ರ ಜ. 1 ರಿಂದಲೇ ವೇತನ ಪರಿಷ್ಕರಣೆ ಆಗಿಬೇಕಿತ್ತು. ಆದರೆ, ಕೋವಿಡ್‌ ಕಾರಣ ಜಾರಿ ಆಗಲಿಲ್ಲ. 2024ರ ಜನವರಿ 1ರಿಂದ ಹೊಸ ವೇತನ ಪರಿಷ್ಕರಣೆ ಆಯಿತು. ಪರಿಷ್ಕರಣೆ ವೇತನ ಜಾರಿ ಜೊತೆಗೆ 38 ತಿಂಗಳ ವೇತನ ಹಿಂಬಾಕಿ ಪಾವತಿಸಬೇಕು’ ಎಂದು ಒತ್ತಾಯಿಸಿದರು.

‘ಶಕ್ತಿ ಯೋಜನೆ ಜಾರಿಗೆ ಸಾರಿಗೆ ಸಿಬ್ಬಂದಿ ಶ್ರಮ ಅಪಾರ. ಆದರೆ, ನೌಕರರನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಈಗ ಕರೆದರೂ ನಾವು ಚರ್ಚೆಗೆ ಸಿದ್ಧವಿದ್ದೇವೆ. ಬೇಡಿಕೆ ಈಡೇರಿಸಿದರೆ ಮುಷ್ಕರ ವಾಪಸ್ ಪಡೆಯುತ್ತೇವೆ’ ಎಂದರು.

ಕ್ರಿಯಾ ಸಮಿತಿ ಪದಾಧಿಕಾರಿ ಆರ್‌.ಪ್ರಸಾದ್‌ ಮಾತನಾಡಿ, ‘ಮುಷ್ಕರ ನಡೆಸುವ ಬಗ್ಗೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಡಿ.9 ರಂದು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತಂದಿದೆ. ಕಾರ್ಮಿಕ ಇಲಾಖೆಯ ನಿಯಮಗಳ ಪ್ರಕಾರ, ಮುಷ್ಕರ ಮಾಡುವ ಮುನ್ನಾ 21 ದಿನ ಮುಂಚಿತವಾಗಿ ನೋಟಿಸ್ ನೀಡಬೇಕು. ನೋಟಿಸ್‌ ನೀಡಿ ಗಮನಕ್ಕೆ ತಂದರೂ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಾರಿಗೆ ನೌಕರರ 2,900 ಕೋಟಿಯನ್ನು ಪಿಎಫ್‌ ರೂಪದಲ್ಲಿ ರಾಜ್ಯ ಸರ್ಕಾರವು ಸಂಬಳದಲ್ಲಿ ಕಡಿತ ಮಾಡಿದೆ. ನಾವು ಪಾವತಿಸಿದ ಹಣವನ್ನು ಸಾಲದ ರೂಪದಲ್ಲಿ ಕೊಡುವಂತೆ ಕೇಳಿದರೂ ನೀಡುತ್ತಿಲ್ಲ’ ಎಂದರು.

ಕ್ರಿಯಾ ಸಮಿತಿ ಪದಾಧಿಕಾರಿ ಅಶೋಕ್ ಕುಮಾರ್ ಮಾತನಾಡಿ, ‘ಸಾರ್ವಜನಿಕರಿಗೆ ತೊಂದರೆ ಮಾಡುವ ಉದ್ದೇಶ ನಮಗಿಲ್ಲ. ಆದರೆ,‌ ನಮ್ಮ ಹೊಟ್ಟೆಗೆ ಇಲ್ಲವೆಂದ‌‌ ಮೇಲೆ ಏನು‌ ಮಾಡುವುದು? ಕುಟುಂಬದ ಪಾಡೇನು’ ಎಂದು ಪ್ರಶ್ನಿಸಿದರು.

‘ಈ ಬಾರಿ ಎಸ್ಮಾ ಜಾರಿ ಮಾಡಿದರೂ ಪರವಾಗಿಲ್ಲ. ನಾವು ಸಂಕಷ್ಟಕ್ಕೆ ‌ಸಿಲುಕಿದ್ದು, ನ್ಯಾಯಬೇಕಿದೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಾಗರಾಜ್, ವೆಂಕಟೇಶ್ ಇದ್ದರು.

Ramesh Babu

Journalist

Recent Posts

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

55 minutes ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

7 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

18 hours ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

20 hours ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

20 hours ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

20 hours ago