ರಾತ್ರಿ ವೇಳೆ ರಸ್ತೆ ಇಕ್ಕೆಲಗಳಲ್ಲಿ ನಿಲ್ಲಿಸಿರುವ ಲಾರಿಗಳಲ್ಲಿ ಡೀಸೆಲ್ ಕಳ್ಳತನ ಮಾಡ್ತಿದ್ದ ಅಂತಾರಾಜ್ಯ ಕಳ್ಳರ ಗ್ಯಾಂಗ್ ನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಪೊಲೀಸರು ಬಂಧಿಸಿದ್ದಾರೆ.
ಕಾರಹಳ್ಳಿ ಗ್ರಾಮದ ಮಿಥುನ್ ಗೌಡ ಎಂಬಾತ ನಮ್ಮ ಲಾರಿಗಳಲ್ಲಿ 800 ಲೀಟರ್ ಡೀಸೆಲ್ ಕಳ್ಳತನವಾಗಿದೆ ಎಂದು ದೂರು ನೀಡಿದ್ರು. ದೂರಿನ ಮೇರೆಗೆ ತನಿಖೆ ನಡೆಸಿ ಡೀಸೆಲ್ ಕಳ್ಳರಾದ ದಿಲ್ಬರ್, ಬಹರುಲ್ ಇಸ್ಲಾಂ, ಶಹನವಾಜ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇನ್ನು ವಿಶ್ವನಾಥಪುರ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಶ್ರೀನಿವಾಸ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ, ಕಾನ್ಸ್ಟೇಬಲ್ ಶಂಭುಲಿಂಗ ನಡೆಸಿದ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.