ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ ಹೊಸ ಮಾರ್ಗ ಕಂಡುಕೊಂಡಿದ್ದಾರೆ. ಸೈಕಲ್‌ಗೆ ಎಡೆಕುಂಟೆ ಜೋಡಿಸಿ ಹೊಲದಲ್ಲಿ ಕಳೆ ತೆಗೆಯುವ ಮೂಲಕ ಗಮನ ಸೆಳೆದಿದ್ದಾರೆ. ಹರಿಹರ ತಾಲೂಕಿನ ಎರೆಹೊಸಹಳ್ಳಿ ಗ್ರಾಮದ ರೈತ ಸಂಜೀವಪ್ಪ ರೆಡ್ಡಿ ಮತ್ತು ಅವರ ಪತ್ನಿ, ಎರಡು ಎಕರೆ ಜಮೀನಿನಲ್ಲಿ ಬೆಳೆದಿರುವ ಮೆಕ್ಕೆಜೋಳದ ಬೆಳೆಯ ಮಧ್ಯೆ ಬೆಳೆದ ಕಳೆ ತೆಗೆಯಲು ಈ ವಿನೂತನ ಪ್ರಯೋಗ ಕೈಗೊಂಡಿದ್ದಾರೆ.
ಬಳಕೆಯಲ್ಲಿರದ ಹಳೆಯ ಸೈಕಲ್‌ಗೆ ಕಳೆ ತೆಗೆಯುವ ಕುಂಟೆಯನ್ನು ಅಳವಡಿಸಿ ಹೊಲದಲ್ಲಿ ಬಳಸುತ್ತಿದ್ದಾರೆ. ಇದರಿಂದ ಕಡಿಮೆ ವೆಚ್ಚದಲ್ಲಿ ಹಾಗೂ ಸುಲಭವಾಗಿ ಕಳೆ ನಿಯಂತ್ರಣ ಮಾಡಬಹುದು ಎಂದು ರೈತರು ತಿಳಿಸಿದ್ದಾರೆ. ಎತ್ತುಗಳು ಸುಲಭವಾಗಿ ಸಿಗುತ್ತಿಲ್ಲ. ಸಿಕ್ಕರೂ ಬಾಡಿಗೆ ದುಬಾರಿಯಾಗಿದೆ. ಇನ್ನು ಟ್ರ್ಯಾಕ್ಟರ್ ಬಳಸಬೇಕೆಂದರೆ ಡೀಸೆಲ್ ವೆಚ್ಚ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖರ್ಚು ಕಡಿಮೆ ಮಾಡಲು ಸೈಕಲ್ ಎಡೆಕುಂಟೆ ಉಪಯುಕ್ತವಾಗಿದೆ ಎಂದು ರೈತ ಸಂಜೀವಪ್ಪ ರೆಡ್ಡಿ ಹೇಳಿದ್ದಾರೆ. ರೈತನ ಈ ವಿನೂತನ ಕೃಷಿ ಪ್ರಯೋಗ ಇದೀಗ ಸ್ಥಳೀಯ ರೈತರ ಗಮನ ಸೆಳೆಯುತ್ತಿದ್ದು, ಕಡಿಮೆ ವೆಚ್ಚದ ಕೃಷಿ ತಂತ್ರಜ್ಞಾನದ ಉತ್ತಮ ಉದಾಹರಣೆಯಾಗಿ ಪರಿಣಮಿಸಿದೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…