ಕರ್ನಾಟಕ ಸರ್ಕಾರ ಡೀಸೆಲ್ ಮೇಲಿನ ತೆರಿಗೆಯನ್ನು ಶೇ.2.73 ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ. ಇದರಿಂದ, ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಳವಾಗಲಿದೆ.
ಈ ಹಿಂದೆ ಶೇ 18.44 ರಷ್ಟು ಇದ್ದ ತೆರಿಗೆ, ಇದೀಗ ಶೇ 21.17ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಮಾರ್ಚ್ 31 ರವರೆಗೂ ಡೀಸೆಲ್ ದರವು ಪ್ರತಿ ಲೀಟರ್‌ಗೆ 89.02 ರೂಪಾಯಿ ಇತ್ತು. ಸದ್ಯ 91.02 ರೂಪಾಯಿಗೆ ಹೆಚ್ಚಳವಾಗಿದೆ.
ರಾಜ್ಯ ಸರ್ಕಾರ ಕಳೆದ ವರ್ಷವೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಿತ್ತು. ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿತ್ತು.
ಮೊದಲೇ ಟೋಲ್ ದರ ಹೆಚ್ಚಳದಿಂದ ಬೇಸರದಲ್ಲಿದ್ದ ವಾಹನ ಸವಾರರಿಗೆ ಡಿಸೇಲ್ ದರ ಹೆಚ್ಚಳವಾಗಿರುವುದು ಚಿಂತೆಗೀಡು ಮಾಡಿದೆ.
ಅದೇರೀತಿ ಕರ್ನಾಟಕ ಸರ್ಕಾರ ಹಾಲು ಮತ್ತು ವಿದ್ಯುತ್ ದರವನ್ನು ಏರಿಕೆ ಮಾಡಿ ಈಗಾಗಲೇ ಶಾಕ್ ನೀಡಿದೆ. ಇದೀಗ ಮತ್ತೊಂದು ದರ ಏರಿಕೆಯ ಬಿಸಿಯನ್ನು ಜನರಿಗೆ ಮುಟ್ಟಿಸಿದೆ.