ಡೀಸೆಲ್​ ಮೇಲಿನ ತೆರಿಗೆ ಶೇ.2.73 ರಷ್ಟು ಹೆಚ್ಚಳ: ಇದರಿಂದ ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಳ

ಕರ್ನಾಟಕ ಸರ್ಕಾರ ಡೀಸೆಲ್​ ಮೇಲಿನ ತೆರಿಗೆಯನ್ನು ಶೇ.2.73 ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ. ಇದರಿಂದ, ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಳವಾಗಲಿದೆ.

ಈ ಹಿಂದೆ ಶೇ 18.44 ರಷ್ಟು ಇದ್ದ ತೆರಿಗೆ, ಇದೀಗ ಶೇ 21.17ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಮಾರ್ಚ್‌ 31 ರವರೆಗೂ ಡೀಸೆಲ್‌ ದರವು ಪ್ರತಿ ಲೀಟರ್‌ಗೆ 89.02 ರೂಪಾಯಿ ಇತ್ತು. ಸದ್ಯ 91.02 ರೂಪಾಯಿಗೆ ಹೆಚ್ಚಳವಾಗಿದೆ.

ರಾಜ್ಯ ಸರ್ಕಾರ ಕಳೆದ ವರ್ಷವೂ ಪೆಟ್ರೋಲ್​ ಮತ್ತು ಡೀಸೆಲ್​ ದರವನ್ನು ಏರಿಕೆ ಮಾಡಿತ್ತು. ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಿತ್ತು.

ಮೊದಲೇ ಟೋಲ್‌ ದರ ಹೆಚ್ಚಳದಿಂದ ಬೇಸರದಲ್ಲಿದ್ದ ವಾಹನ ಸವಾರರಿಗೆ ಡಿಸೇಲ್ ದರ ಹೆಚ್ಚಳವಾಗಿರುವುದು ಚಿಂತೆಗೀಡು ಮಾಡಿದೆ.

ಅದೇರೀತಿ ಕರ್ನಾಟಕ ಸರ್ಕಾರ ಹಾಲು ಮತ್ತು ವಿದ್ಯುತ್​ ದರವನ್ನು ಏರಿಕೆ ಮಾಡಿ ಈಗಾಗಲೇ ಶಾಕ್​ ನೀಡಿದೆ. ಇದೀಗ ಮತ್ತೊಂದು ದರ ಏರಿಕೆಯ ಬಿಸಿಯನ್ನು ಜನರಿಗೆ ಮುಟ್ಟಿಸಿದೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

14 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

19 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

22 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

2 days ago