ಡೀಸೆಲ್‌, ಹಾಲು, ಆಹಾರ ಪದಾರ್ಥಗಳ ಬೆಲೆ ಏರಿಕೆ ಜನಸಾಮಾನ್ಯರಿಗೆ ಹೊಡೆತ- ಯಲುವಗುಳಿ ನಾಗರಾಜ್ ಆಕ್ರೋಶ

ಕೋಲಾರ: ಅಗತ್ಯ ವಸ್ತುಗಳು ಸೇರಿದಂತೆ ಹಾಲು, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆಯಲು ರಾಜ್ಯದ ಕಾಂಗ್ರೆಸ್ ಸರ್ಕಾರವು ಮುಂದಾಗಿದೆ ಎಂದು ಜೆಡಿಎಸ್‌ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಸರ್ಕಾರದ ಕ್ರಮವನ್ನು ಖಂಡಿಸಿದರು

ಬೆಲೆ ಏರಿಕೆ ಕುರಿತಂತೆ ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು ರಾಜ್ಯದ ಜನರ ಕಷ್ಟವನ್ನು ಅರ್ಥ ಮಾಡಿಕೊಳ್ಳದ ಕಾಂಗ್ರೆಸ್ ಸರ್ಕಾರವು ವಿಫಲವಾಗಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೇಳೋದು ಒಂದು ಮಾಡೋದು ಬೆಲೆ ಏರಿಕೆ ಮೂಲಕ ಇನ್ನೊಂದು ಆಡಳಿತವನ್ನು ನೀಡಲು ಹೊರಟಿದ್ದಾರೆ ಉಚಿತ ಗ್ಯಾರಂಟಿಗಳ ಭರವಸೆ ಮೂಲಕ ಮತ ಕೊಟ್ಟು ಅಧಿಕಾರಕ್ಕೆ ತಂದ ಮತದಾರರಿಗೆ ವರವಾಗುವ ಬದಲು ಈ ಸರ್ಕಾರದಿಂದ ಶಾಪಗ್ರಸ್ಥವಾಗಿದೆ. ಹಾಲಿನ ದವರನ್ನು ರೂ. ೪ ಹೆಚ್ಚಳ ಡಿಸೇಲ್ 2 ರೂ ಹೆಚ್ಚಳ ಸೇರಿದಂತೆ ಒಂದಾದ ಮೇಲೆ ಒಂದು ಪದಾರ್ಥಗಳ ಬೆಲೆಯನ್ನು ಹೆಚ್ಚಳ ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ಆರೋಪಿಸಿದರು

ಒಂದು ಕಡೆ ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ದ್ರೋಹ ಮಾಡಿದ್ದಾರೆ ಸರ್ಕಾರದಲ್ಲಿ ಹಣವಿಲ್ಲದೆ ದಿವಾಳಿಯಾಗಿರುವ ಸರ್ಕಾರವು ಗ್ರಾಹಕರಿಂದ ಹಣ ಸುಲಿಗೆ ಮಾಡಿಕೊಡಲು ಮುಂದಾಗಿರುವುದು ನಾಚಿಗೇಡಿನ ಸಂಗತಿಯಾಗಿದೆ. ರಾಜ್ಯದ ಇತಿಹಾಸದಲ್ಲೇ ಕಂಡ ಅತ್ಯಂತ ಜನವಿರೋಧಿ ಸರ್ಕಾರವಾಗಿದೆ ಮುಂದಿನ ದಿನಗಳಲ್ಲಿ ಜನರೇ ಸರ್ಕಾರಕ್ಕೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದ್ದಾರೆ,

Leave a Reply

Your email address will not be published. Required fields are marked *