ಕೋಲಾರ: ಅಗತ್ಯ ವಸ್ತುಗಳು ಸೇರಿದಂತೆ ಹಾಲು, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆಯಲು ರಾಜ್ಯದ ಕಾಂಗ್ರೆಸ್ ಸರ್ಕಾರವು ಮುಂದಾಗಿದೆ ಎಂದು ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಸರ್ಕಾರದ ಕ್ರಮವನ್ನು ಖಂಡಿಸಿದರು
ಬೆಲೆ ಏರಿಕೆ ಕುರಿತಂತೆ ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು ರಾಜ್ಯದ ಜನರ ಕಷ್ಟವನ್ನು ಅರ್ಥ ಮಾಡಿಕೊಳ್ಳದ ಕಾಂಗ್ರೆಸ್ ಸರ್ಕಾರವು ವಿಫಲವಾಗಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೇಳೋದು ಒಂದು ಮಾಡೋದು ಬೆಲೆ ಏರಿಕೆ ಮೂಲಕ ಇನ್ನೊಂದು ಆಡಳಿತವನ್ನು ನೀಡಲು ಹೊರಟಿದ್ದಾರೆ ಉಚಿತ ಗ್ಯಾರಂಟಿಗಳ ಭರವಸೆ ಮೂಲಕ ಮತ ಕೊಟ್ಟು ಅಧಿಕಾರಕ್ಕೆ ತಂದ ಮತದಾರರಿಗೆ ವರವಾಗುವ ಬದಲು ಈ ಸರ್ಕಾರದಿಂದ ಶಾಪಗ್ರಸ್ಥವಾಗಿದೆ. ಹಾಲಿನ ದವರನ್ನು ರೂ. ೪ ಹೆಚ್ಚಳ ಡಿಸೇಲ್ 2 ರೂ ಹೆಚ್ಚಳ ಸೇರಿದಂತೆ ಒಂದಾದ ಮೇಲೆ ಒಂದು ಪದಾರ್ಥಗಳ ಬೆಲೆಯನ್ನು ಹೆಚ್ಚಳ ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ಆರೋಪಿಸಿದರು
ಒಂದು ಕಡೆ ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ದ್ರೋಹ ಮಾಡಿದ್ದಾರೆ ಸರ್ಕಾರದಲ್ಲಿ ಹಣವಿಲ್ಲದೆ ದಿವಾಳಿಯಾಗಿರುವ ಸರ್ಕಾರವು ಗ್ರಾಹಕರಿಂದ ಹಣ ಸುಲಿಗೆ ಮಾಡಿಕೊಡಲು ಮುಂದಾಗಿರುವುದು ನಾಚಿಗೇಡಿನ ಸಂಗತಿಯಾಗಿದೆ. ರಾಜ್ಯದ ಇತಿಹಾಸದಲ್ಲೇ ಕಂಡ ಅತ್ಯಂತ ಜನವಿರೋಧಿ ಸರ್ಕಾರವಾಗಿದೆ ಮುಂದಿನ ದಿನಗಳಲ್ಲಿ ಜನರೇ ಸರ್ಕಾರಕ್ಕೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದ್ದಾರೆ,
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು…
ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…