ಡೆಂಗ್ಯೂ ತಡೆಗಟ್ಟಲು ಜಾಥಾ ಕಾರ್ಯಕ್ರಮ

ತಾಲೂಕಿನ ಕನಸುವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ  ಕನಸವಾಡಿ ಕಾಲೋನಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಹಕಾರದೊಂದಿಗೆ ಶಿಕ್ಷಣ ಫೌಂಡೇಶನ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಅಧಿಕಾರಿಗಳು ಹಾಗೂ ಕೂಸಿನ ಮನೆ ಶಿಕ್ಷಕರು, ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು  ಸಹಕಾರದೊಂದಿಗೆ ಡೆಂಗ್ಯೂ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಜಾಥಾವನ್ನು ಹಮ್ಮಿಕೊಳ್ಳಲಾಯಿತು.

ಡೆಂಗ್ಯೂ ನಿಯಂತ್ರಣಕ್ಕೆ ಯಾವ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಕಾಶ್ ರವರು ತಿಳಿಸಿಕೊಟ್ಟರು.

ಜಾಥಾ ಕಾರ್ಯಕ್ರಮದಲ್ಲಿ ಡೆಂಗ್ಯೂ ಮತ್ತು ಆರೋಗ್ಯದ ಸ್ಲೋಗನ್ ಗಳನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು‌.

ಈ ಕಾರ್ಯಕ್ರಮದಲ್ಲಿ ಕನಸವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿ ಡಿ ಒ ರಾಮಯ್ಯ ಹಾಗೂ ಕಾರ್ಯದರ್ಶಿ ನಾಗರಾಜ್, ಮುಖ್ಯ ಶಿಕ್ಷಕರು, ಸಿ ರ್ ಪಿ, ಗ್ರಂಥಪಾಲಕರಾದ ಪೂರ್ಣಚಂದ್ರ, ಶಿಕ್ಷಣ ಫೌಂಡೇಶನ್ ಬೆಂಗಳೂರು ಗ್ರಾಮಾಂತರ ಸಂಯೋಜಕರಾದಂತ ಗಂಗಾಧರ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ವಿವೇಚನೆ ಮತ್ತು ಜವಾಬ್ದಾರಿ‌……..

ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…

8 hours ago

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

20 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

20 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

21 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

22 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

1 day ago