ಡೆಂಗ್ಯೂ ಮಲೇರಿಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಗ್ಯೂ ಮಲೇರಿಯಾ ನಂತಹ ರೋಗಗಳು ಕಂಡು ಬರುವ ಸಂಭವ ಹೆಚ್ಚಿದ್ದು, ಡೆಂಗ್ಯೂ ಮಲೇರಿಯಾ ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾವಾಗಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿಶ್ವ ಮಲೇರಿಯಾ ದಿನಾಚರಣೆ ಹಾಗೂ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಅಂತರ್ ಇಲಾಖಾ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕು ಕೇಂದ್ರಗಳಲ್ಲಿ ರಕ್ತ ಲೇಪನ ಸಂಗ್ರಹ ಕಾರ್ಯ ಹೆಚ್ಚು, ಹೆಚ್ಚು ಆದಲ್ಲಿ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ಜ್ವರದಂತಹ ಪ್ರಕರಣಗಳನ್ನು ತ್ವರಿತವಾಗಿ ಪತ್ತೆ ಹಚ್ಚಿ ಶೀಘ್ರ ಚಿಕಿತ್ಸೆ ಕೈಗೊಳ್ಳಬಹುದು. ಆದ್ದರಿಂದ, ಈ ಎಲ್ಲಾ ಜ್ವರ ಪ್ರಕರಣಗಳಿಗೆ ಸಂಬಂಧಿಸಿದಂತೆ ತ್ವರಿತವಾಗಿ ರಕ್ತ ಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಿಗೆ ತಲುಪಿಸಿ ರೋಗ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.
ಕಲ್ಲು ಗಣಿಗಾರಿಕೆಗಳು, ಕಟ್ಟಡ ನಿರ್ಮಾಣ ಪ್ರದೇಶಗಳು, ಹೊರ ರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರಿಗೆ ಕಡ್ಡಾಯ ರಕ್ತಲೇಪನ ಸಂಗ್ರಹಿಸಿ ದೃಢಪಟ್ಟ ಪ್ರಕರಣಗಳಿಗೆ ವೈದ್ಯಾಧಿಕಾರಿಗಳು ತ್ವರಿತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಸೊಳ್ಳೆ ಉತ್ಪತ್ತಿ ತಾಣಗಳಾದ ತೆರೆದ ತೊಟ್ಟಿ, ಮೇಲ್ಚಾವಣಿ ಇಲ್ಲದ ತೊಟ್ಟಿಗಳು ಕಿರು ನೀರು ಸರಬರಾಜು ಮಾಡುವಂತಹ ತೊಟ್ಟಿಗಳನ್ನು ಭದ್ರವಾದ ಮುಚ್ಚಳ ಅಥವಾ ಬಟ್ಟೆಯನ್ನು ಮುಚ್ಚಬೇಕು ಶಾಲೆ ಅಂಗನವಾಡಿ ಕೇಂದ್ರಗಳಲ್ಲಿ ತೆರೆದ ತೊಟ್ಟಿ ಗಳಿದ್ದಲ್ಲಿ ಮುಂಜಾಗ್ರತಾ ಕ್ರಮವಾಗಿ ಅವುಗಳ ಮೇಲ್ಭಾಗವನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದರು.

ಆರೋಗ್ಯ ಇಲಾಖೆ ಪೋಸ್ಟರ್, ಬ್ಯಾನರ್‌ಗಳ ಮೂಲಕ, ಮಾಹಿತಿ- ಶಿಕ್ಷಣ-ಸಂವಹನ ಚಟುವಟಿಕೆಗಳ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಚ್ಚರಿಕೆ ಹಾಗೂ ಜನಜಾಗೃತಿ ಮೂಡಿಸಬೇಕು ಎಂದರು.

ಕುಡಿಯುವ ನೀರು ಸರಬರಾಜು ಮಾಡುವ ಮೊದಲು ಸೂಕ್ತ ವಾದ ಪ್ರಮಾಣದಲ್ಲಿ ಕ್ಲೋರಿನೇಷನ್ ಮಾಡುವುದು, ಗುಂಡಿಗಳು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಕೊಳವೆಬಾವಿಗಳಿಂದ ಅಥವಾ ಸಾರ್ವಜನಿಕ ನಲ್ಲಿಗಳಲ್ಲಿ ನೀರು ಸೋರಿಕೆಯಾಗುತ್ತಿದ್ದಲ್ಲಿ ದುರಸ್ತಿಗೊಳಿಸಿ ಸರಬರಾಜು ಮಾಡುವುದು, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವುದು, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿವಾರಿಸುವ ನಿಟ್ಟಿನಲ್ಲಿ ಗ್ರಾಮ-ನಗರ ಪ್ರದೇಶಗಳಲ್ಲಿ ಗಳಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯ ವಸ್ತುಗಳು, ನೀರು ಶೇಖರಣೆ ಗೊಳ್ಳುವ ಇತರೆ ಅನುಪಯುಕ್ತ ವಸ್ತುಗಳ ಸೂಕ್ತ ವಿಲೇವಾರಿ ಕೈಗೊಳ್ಳುವುದು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸೊಳ್ಳೆ ನಾಶಕ ದ್ರಾವಣ ಸಿಂಪಡಿಸುವುದು.
ಸರ್ಕಾರಿ ಖಾಸಗಿ ಕಟ್ಟಡ ಕಾಮಗಾರಿಗಳಲ್ಲಿ ತೊಡಗುವ ವಲಸೆ ಕಾರ್ಮಿಕರನ್ನು ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ತಪಾಸಣೆ ಮಾಡುವುದು, ವಸತಿ ನಿಲಯಗಳ, ಸಮುಚ್ಚಯಗಳ ಒಳಾಂಗಣ ಹೊರಾಂಗಣಗಳಲ್ಲಿ ಶುಚಿತ್ವ ಕಾಪಾಡುವುದು, ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸಹಯೋಗದಲ್ಲಿ ಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವುದು ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ರೋಗ ನಿಯಂತ್ರಣಕ್ಕೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಅವರು ವಿವರಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ಜಿಲ್ಲಾ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

21 minutes ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

10 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

23 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago