ಡೆತ್ ನೋಟ್ ಬರೆದಿಟ್ಟು ಠಾಣೆಯಲ್ಲಿಯೇ ನೇಣಿಗೆ ಶರಣಾದ ಹೆಡ್‌ ಕಾನ್‌ಸ್ಟೇಬಲ್‌

ಶಿವಮೊಗ್ಗ : ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ ಡೆತ್ ನೋಟ್ ಬರೆದಿಟ್ಟು ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮೃತರನ್ನು ಹೆಡ್‌ ಕಾನ್‌ಸ್ಟೇಬಲ್ ಮುಹಮ್ಮದ್‌ ಝಕ್ರಿಯಾ (55) ಎಂದು ಗುರುತಿಸಲಾಗಿದೆ.

ರಾತ್ರಿ ವೇಳೆ ಪಶ್ಚಿಮ ಸಂಚಾರ ಠಾಣೆಯ ಹಿಂಬದಿ ಸೆಲ್‌ಗಳಿರುವ ಪ್ರದೇಶದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

ಮೃತರು ಕಳೆದ ಕೆಲವು ದಿನಗಳಿಂದ ರಜೆ ಮೇಲೆ ಇದ್ದು, ಮೂರು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ

ಡೆತ್ ನೋಟ್ ನಲ್ಲಿ ಏನಿದೆ?

ನನ್ನ ಹಿರಿಯ ಅಧಿಕಾರಿಗಳು ಹಾಗೂ ನನ್ನ ಪ್ರೀತಿಯ ಗೆಳೆಯ ಹಾಗೂ ತಮ್ಮ ಆದಿಲ್ ಹಾಗೂ ನಮ್ಮ ಠಾಣೆಯ ಸಹೋದ್ಯೋಗಿಗಳೆ ನಮಸ್ಕಾರಗಳು ನಾನು ಇಲಾಖೆಯಲ್ಲಿ 26 ವರ್ಷ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದೇನೆ. ಕಳೆದ ಒಂದು ವರ್ಷದಿಂದ ನಮ್ಮ ಠಾಣೆಯ ನಾಸೀರ್ ಅಹಮದ್ (ಹೆಚ್‌ಸಿ 131) ಅವರು ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದು, ಜಗಳ ಮಾಡಿ ನನ್ನ ಬಗ್ಗೆ ಸಾರ್ವಜನಿಕವಾಗಿ ಅಪಪ್ರಚಾರ ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ನೋವಾಗಿದೆ ಎಂದು ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!