ಶಿವಮೊಗ್ಗ : ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಡೆತ್ ನೋಟ್ ಬರೆದಿಟ್ಟು ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮೃತರನ್ನು ಹೆಡ್ ಕಾನ್‌ಸ್ಟೇಬಲ್ ಮುಹಮ್ಮದ್ ಝಕ್ರಿಯಾ (55) ಎಂದು ಗುರುತಿಸಲಾಗಿದೆ.
ರಾತ್ರಿ ವೇಳೆ ಪಶ್ಚಿಮ ಸಂಚಾರ ಠಾಣೆಯ ಹಿಂಬದಿ ಸೆಲ್‌ಗಳಿರುವ ಪ್ರದೇಶದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
ಮೃತರು ಕಳೆದ ಕೆಲವು ದಿನಗಳಿಂದ ರಜೆ ಮೇಲೆ ಇದ್ದು, ಮೂರು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ
ಡೆತ್ ನೋಟ್ ನಲ್ಲಿ ಏನಿದೆ?
ನನ್ನ ಹಿರಿಯ ಅಧಿಕಾರಿಗಳು ಹಾಗೂ ನನ್ನ ಪ್ರೀತಿಯ ಗೆಳೆಯ ಹಾಗೂ ತಮ್ಮ ಆದಿಲ್ ಹಾಗೂ ನಮ್ಮ ಠಾಣೆಯ ಸಹೋದ್ಯೋಗಿಗಳೆ ನಮಸ್ಕಾರಗಳು ನಾನು ಇಲಾಖೆಯಲ್ಲಿ 26 ವರ್ಷ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದೇನೆ. ಕಳೆದ ಒಂದು ವರ್ಷದಿಂದ ನಮ್ಮ ಠಾಣೆಯ ನಾಸೀರ್ ಅಹಮದ್ (ಹೆಚ್‌ಸಿ 131) ಅವರು ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದು, ಜಗಳ ಮಾಡಿ ನನ್ನ ಬಗ್ಗೆ ಸಾರ್ವಜನಿಕವಾಗಿ ಅಪಪ್ರಚಾರ ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ನೋವಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…