ಡೆತ್ ನೋಟ್ ಬರೆದು ಯುವತಿ ನೇಣಿಗೆ ಶರಣಾಗಿರುವ ಘಟನೆ ನಗರದ ತ್ಯಾಗರಾಜನಗರದ ಬಳಿ ಇಂದು ಸಂಜೆ ಸುಮಾರು 5:30ರ ಸಮಯದಲ್ಲಿ ನಡೆದಿದೆ.
ನಾಗಭೂಷಣ್ ಹಾಗೂ ಈಶ್ವರಮ್ಮ ದಂಪತಿಯ ಒಬ್ಬಳೇ ಮಗಳಾದ ಝಾನ್ಸಿ(17), ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ.
ನಗರದ ಖಾಸಗಿ ಕಾಲೇಜಿನಲ್ಲಿ ಝಾನ್ಸಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಾಲೇಜಿನಿಂದ ಮನೆಗೆ ಬಂದು ಡೆತ್ ನೋಟ್ ಬರೆದಿಟ್ಟು ಕಾಲೇಜಿನ ಸಮವಸ್ತ್ರದಲ್ಲೇ ನೇಣಿಗೆ ಶರಣಾಗಿದ್ದಾರೆ.
ಸಾವಿನ ಬಗ್ಗೆ ಇನ್ನೂ ನಿಖರ ಮಾಹಿತಿ ತಿಳಿದುಬಂದಿಲ್ಲ. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಡೆತ್ ನೋಟ್ ವಿವರ
ನಾನು ಯಾರಿಗೂ ಮೋಸ ಮಾಡಿಲ್ಲ….
ಮಿಸ್ ಯು ಆಲ್ ಫ್ರೆಂಡ್ಸ್….
ಬುಜ್ಜಿ ಐ ಮಿಸ್ ಯು… ಮಾ ಐ ಲವ್ ಯು ಸೊ ಮಚ್ ಮಾ…
ನಾನು ಇನ್ನೂ ಈ ಲೋಕವನ್ನೇ ಬಿಟ್ಟು ಹೋಗುತ್ತಿದ್ದೇನೆ…
ಎಲ್ಲರೂ ಖುಷಿಯಾಗಿರಿ ಎಂದು ಬರೆದಿದ್ದಾರೆ.