ಕಾಲೇಜಿನಿಂದ ಮನೆಗೆ ಬಂದು ಡೆತ್ ನೋಟ್ ಬರೆದು ನೇಣಿಗೆ ಶರಣಾದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ

ಡೆತ್ ನೋಟ್ ಬರೆದು ಯುವತಿ ನೇಣಿಗೆ ಶರಣಾಗಿರುವ ಘಟನೆ ನಗರದ ತ್ಯಾಗರಾಜನಗರದ ಬಳಿ ಇಂದು ಸಂಜೆ ಸುಮಾರು 5:30ರ ಸಮಯದಲ್ಲಿ ನಡೆದಿದೆ.

ನಾಗಭೂಷಣ್ ಹಾಗೂ ಈಶ್ವರಮ್ಮ ದಂಪತಿಯ ಒಬ್ಬಳೇ ಮಗಳಾದ ಝಾನ್ಸಿ(17), ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ.

 ನಗರದ ಖಾಸಗಿ ಕಾಲೇಜಿನಲ್ಲಿ ಝಾನ್ಸಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಾಲೇಜಿನಿಂದ ಮನೆಗೆ ಬಂದು ಡೆತ್ ನೋಟ್ ಬರೆದಿಟ್ಟು ಕಾಲೇಜಿನ ಸಮವಸ್ತ್ರದಲ್ಲೇ ನೇಣಿಗೆ ಶರಣಾಗಿದ್ದಾರೆ.

ಸಾವಿನ ಬಗ್ಗೆ ಇನ್ನೂ ನಿಖರ ಮಾಹಿತಿ ತಿಳಿದುಬಂದಿಲ್ಲ. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ‌ ನಡೆಸುತ್ತಿದ್ದಾರೆ. ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಡೆತ್ ನೋಟ್ ವಿವರ

ನಾನು ಯಾರಿಗೂ ಮೋಸ ಮಾಡಿಲ್ಲ….

ಮಿಸ್ ಯು ಆಲ್ ಫ್ರೆಂಡ್ಸ್….

ಬುಜ್ಜಿ ಐ ಮಿಸ್ ಯು… ಮಾ ಐ ಲವ್ ಯು‌ ಸೊ ಮಚ್ ಮಾ…

ನಾನು ಇನ್ನೂ ಈ‌ ಲೋಕವನ್ನೇ ಬಿಟ್ಟು ಹೋಗುತ್ತಿದ್ದೇನೆ…

ಎಲ್ಲರೂ ಖುಷಿಯಾಗಿರಿ ಎಂದು ಬರೆದಿದ್ದಾರೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

6 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

17 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

22 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

1 day ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago