ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಅತ್ಯಂತ ರೋಚಕ ಪಂದ್ಯ ಸೂಪರ್ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ರಾಜಾಸ್ಥಾನ ರಾಯಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ
ಟಾಸ್ ಗೆದ್ದ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರ ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡಿದ ರಾಯಲ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರರನ್ನು ಪೆವಿಲಿಯನ್ ಸೇರಿದರು.
ನಂತರ ಬಂದ ಕೆ.ಎಲ್ . ರಾಹುಲ್ (38) ಹಾಗೂ ಅಭಿಷೇಕ್ ಪೋರೆಲ್ (49), ಮಧ್ಯಮ ಕ್ರಮಾಂಕದ ಆಟಗಾರ ಸ್ಟಬ್ಸ್ (34) ಹಾಗೂ ನಾಯಕ ಅಕ್ಷರ್ ಪಟೇಲ್ (34) ನೆರವಿನಿಂದ 188ರನ್ ಕಲೆ ಹಾಕಿದರು.
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಉತ್ತಮ ಆರಂಭ ದೊರೆಯಿತು, ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (51) ಹಾಗೂ ನಾಯಕ ಸಂಜು ಸ್ಯಾಮ್ಸನ್ (31) ರನ್ ಪೇರಿಸಿದರು.
ನಂತರ ಬಂದ ನಿತೀಶ್ ರಾಣ(51) ಹಾಗೂ ಧ್ರುವ ಜುರೇಲ್(26) ರನ್ ನೆರವಿನಿಂದ 188 ರನ್ ಪೇರಿಸಿ ಪಂದ್ಯ ಸೂಪರ್ ಓವರ್ ನತ್ತ ಹೊರಳಿತು.
ಸೂಪರ್ ಓವರ್ ನಲ್ಲಿ ಉತ್ತಮ ಬೌಲಿಂಗ್ ಮಾಡಿದ ಮಿಚೆಲ್ ಸ್ಟಾಕ್ 11ರನ್ ನೀಡಿ ರಾಜಾಸ್ಥಾನ ರಾಯಲ್ಸ್ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದರು, ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಕೆ.ಎಲ್ . ರಾಹುಲ್ ಹಾಗೂ ಸ್ಟಬ್ಸ್ ಗೆಲುವಿನ ದಡ ಸೇರಿಸಿದರು.