ಡೆಲ್ಲಿ ತಂಡದ ವಿರುದ್ಧ 6 ವಿಕೆಟ್ ಗಳಿಂದ ಗೆದ್ದು ಸತತ 2 ನೇ ಬಾರಿಗೆ ಡಬ್ಲ್ಯುಪಿಎಲ್ ಕಪ್ ಮುಡಿಗೇರಿಸಿಕೊಂಡ ಆರ್ ಸಿಬಿ

ವಡೋದರಾದಲ್ಲಿ ನಡೆದ ಡಬ್ಲ್ಯುಪಿಎಲ್ 2026 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ತಂಡದ ವಿರುದ್ಧ 6 ವಿಕೆಟ್ ಗಳಿಂದ ಗೆದ್ದು ಸತತ 2 ನೇ ಬಾರಿಗೆ ಡಬ್ಲ್ಯುಪಿಎಲ್ ಕಪ್ ನ್ನು ಮುಡಿಗೇರಿಸಿಕೊಂಡು ಇತಿಹಾಸ ನಿರ್ಮಿಸಿದೆ.

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ ತಂಡ ಡೆಲ್ಲಿ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 203 ರನ್ ಗಳಿಗೆ ಕಟ್ಟಿ ಹಾಕಿತು.

ಉತ್ತಮ ರನ್ ಟಾರ್ಗೆಟ್ ನ್ನು ಬೆನ್ನಟ್ಟಿದ ಆರ್ ಸಿಗೆ ಗ್ರೇಸ್ ಹ್ಯಾರೀಸ್ 7 ಎಸೆತಗಳಲ್ಲಿ 9 ರನ್ ಗಳಿಸಿ ಪೆವಿಲಿಯನ್ ನತ್ತ ನಡೆದಿದ್ದು, ಆರಂಭಿಕ ಆಘಾತವಾಗಿತ್ತು. ಆದರೆ ಸ್ಮೃತಿ ಮಂಧಾನ 42 ಎಸೆತಗಳಲ್ಲಿ 87 ರನ್ ಹಾಗೂ ಜಾರ್ಜಿಯಾ ವೋಲ್ 54 ಎಸೆತಗಳಲ್ಲಿ 79 ರನ್ ಗಳಿಸಿದ್ದು ತಂಡದ ಗೆಲುವಿಗೆ ಭದ್ರ ಬುನಾದಿಯಾಯಿತು

ಕ್ರೀಸ್ ನಲ್ಲಿದ್ದ ನಡಿನ್ ಡಿ ಕ್ಲರ್ಕ್, ರಾಧಾ ಯಾದವ್ ತಂಡವನ್ನು ಗೆಲುವಿನ ದಡ ಸೇರಿಸಿದರು. ರನ್ ಚೇಸಿಂಗ್ ನಲ್ಲಿ ಆರ್ ಸಿಬಿ ಇತಿಹಾಸ ನಿರ್ಮಾಣ ಮಾಡಿದ್ದು, 19.4 ಓವರ್ ಗಳಲ್ಲಿ 204 ರನ್ ಗಳಿಸಿದ್ದು, ಇತಿಹಾಸದಲ್ಲೇ ಅತಿ ದೊಡ್ಡ ರನ್ ಚೇಸಿಂಗ್ ದಾಖಲೆ ನಿರ್ಮಿಸಿದೆ.

ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಆರ್ ಸಿಬಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಮೊದಲು ಫೈನಲ್ಸ್ ಪ್ರವೇಶಿಸಿ ಟ್ರೋಫಿಯನ್ನೂ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

20 minutes ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

4 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

4 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

6 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

11 hours ago