Categories: ಮೈಸೂರು

“ಡೇ ಕೇರ್ ಕಿಮೋಥೇರಪಿ” ಕೇಂದ್ರ ಉದ್ಘಾಟನೆ

ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒದಗಿಸುವುದು ಸರ್ಕಾರದ ಗುರಿ. ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯವನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಮೈಸೂರು ಜಿಲ್ಲಾ ಆಸ್ಪತ್ರೆ ಮೇಟಗಳ್ಳಿಯಲ್ಲಿ “ಡೇ ಕೇರ್ ಕಿಮೋಥೇರಪಿ” ಕೇಂದ್ರವನ್ನು ವಿಡಿಯೋ ಸಂವಾದದ ಮೂಲಕ ಉದ್ಘಾಟಿಸಿ, ಮಾತನಾಡಿದರು.

ಈ ಮೊದಲು ಕೀಮೋಥೆರಪಿ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಬೇಕಾಗಿತ್ತು. ಇದು ರೋಗಿಗಳ ಪಾಲಿಗೆ ಕಷ್ಟಸಾಧ್ಯವಾಗಿತ್ತು. ರಾಜ್ಯದಲ್ಲಿ ಪ್ರತಿವರ್ಷ ಹೊಸ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಬಡ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ದೊರೆಯದ ಕಾರಣ, ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದರು. ಕ್ಯಾನ್ಸರ್ ರೋಗಕ್ಕೆ ತುತ್ತಾಗುವವರ ಸಂಖ್ಯೆಯಲ್ಲಿ ತಮಿಳುನಾಡಿನ ನಂತರದ ಸ್ಥಾನವನ್ನು ಕರ್ನಾಟಕ ಪಡೆದಿದೆ. ಈ ಕಾಯಿಲೆ ತಕ್ಷಣ ಪತ್ತೆಯಾದರೆ ಗುಣಪಡಿಸುವ ಸಾಧ್ಯತೆಯಿದ್ದು, ಪತ್ತೆಯಾಗದ ಸಂದರ್ಭದಲ್ಲಿ ಮಾರಣಾಂತಿಕವಾಗಿಯೂ ಪರಿಣಮಿಸಬಹುದು. ಆದರೆ ಆಧುನಿಕ ಔಷದೋಪಚಾರಗಳು ಲಭ್ಯವಿದ್ದರೂ ದುಬಾರಿಯಾಗಿದೆ ಎಂದು ತಿಳಿಸಿದರು.

ಭಾರತದಲ್ಲಿ ಸುಮಾರು 100 ಕೋಟಿ ಜನರಿಗೆ ಬಡತನದಿಂದಾಗಿ ಚಿಕಿತ್ಸೆ ಪಡೆಯುವ ಶಕ್ತಿಯಿಲ್ಲದಾಗಿದೆ.
2013ರಲ್ಲಿ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈಸೂರಿನಲ್ಲಿ ಜಿಲ್ಲಾ ಆಸ್ಪತ್ರೆ ಇರಲಿಲ್ಲ. ಈ ಬಾರಿ ಜಿಲ್ಲೆಯಲ್ಲಿ ಸಕಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಿದ್ದೇವೆ ಎಂದರು.

240 ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳಿವೆ. ಡಯಾಲಿಸಿಸ್ ಎನ್ನುವುದು ಈಗ ಸಾಮಾನ್ಯ ರೋಗ ಎಂಬಂತಾಗಿದೆ. ಇದಕ್ಕೆ ದುಬಾರಿ ಬೆಲೆಯಾಗಿರುವುದರಿಂದ ಖಾಸಗಿ ಆಸ್ಪತ್ರೆಗೆ ಬಡ ಜನರು ಹೋಗಲಾಗುವುದಿಲ್ಲ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷಗಳಷ್ಟು ನೆರವು ಕೊಟ್ಟರೂ ಸಂಪೂರ್ಣ ಚಿಕಿತ್ಸೆಗೆ ಅದು ಸಾಲುವುದಿಲ್ಲ. ಇತ್ತೀಚೆಗೆ ಜನರಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಹೋದರೆ ಮಾತ್ರ ಖಾಯಿಲೆ ವಾಸಿಯಾಗುತ್ತದೆ ಎಂಬ ಭಾವನೆ ಇದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಅನುಭವ ಮತ್ತು ಪರಿಣಿತಿ ಇರುವ ವೈದ್ಯರಿದ್ದಾರೆ. ಜನರು ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಖಾಯಿಲೆ ವಾಸಿಯಾಗುತ್ತದೆ ಎಂದು ಅರಿಯಬೇಕು. ಜಯದೇವ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆ ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆಯಿಲ್ಲ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಅದು ಇದ್ದರೆ ರೋಗ ಹರಡುವುದು ಕಡಿಮೆಯಾಗುತ್ತದೆ. ಸಂಸ್ಥೆಯ ಮುಖ್ಯಸ್ಥರು ಒಳ್ಳೆಯವರಿದ್ದರೆ ಒಳ್ಳೆ ಕೆಲಸಗಳಾಗುತ್ತದೆ. ಸರ್ಕಾರ ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಕಾಮಗಾರಿಗಳು, ಜನರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸಗಳಿಗೆ ಅನುದಾನ ನೀಡುತ್ತದೆ ಎಂದರು.

ನಿಮ್ಹಾನ್ಸ್ ಕೇಂದ್ರ ಮೈಸೂರು ನಗರದಲ್ಲಿ ಆಗಬೇಕೆಂಬ ಕಾರಣದಿಂದ ಈ ಬಾರಿಯ ಬಜೆಟ್ ನಲ್ಲಿ ಅನುದಾನವನ್ನು ಮೀಸಲಿರಿಸಲಾಗಿದೆ. 60% ರೋಗಿಗಳು ಚಿಕಿತ್ಸೆಗಾಗಿ ನೂರು ಕಿಮೀ ವರೆಗೆ ಪ್ರಯಾಣ ಮಾಡಬೇಕಾದ ಸ್ಥಿತಿ ಇದೆ. ಅದಕ್ಕಾಗಿ ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೀಮೋಥೆರಪಿ ಸೌಲಭ್ಯವನ್ನು ಒದಗಿಸುತ್ತಿದ್ದೇವೆ ಎಂದು ತಿಳಿಸಿದರು.

ಕೆಸ್ತೂರು ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಯಂದಾಗಿ ಔಷಧ ಖರೀದಿಸಲು ಹಾಗೂ ಚಿಕಿತ್ಸೆ ಪಡೆಯಲು ಉಚಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದ್ದು ಗಮನಿಸಿದ್ದೆ. ಸಮ ಸಮಾಜ ನಿರ್ಮಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರ ಮಾತನ್ನು ನಂಬಬೇಡಿ, ಅದು ಕೇವಲ ಸುಳ್ಳು ಎಂದರು.

ಕೀಮೋಥರೆಪಿ ಸೌಲಭ್ಯಗಳಿಲ್ಲದೇ ಇರುವ ಜಿಲ್ಲೆಗಳಲ್ಲಿ ಶೀಘ್ರವಾಗಿಯೇ ಕೀಮೋಥೆರಪಿ ಕೇಂದ್ರಗಳನ್ನು ತೆರೆಯಲಾಗುವುದು. ಕ್ಯಾನ್ಸರ್ ಖಾಯಿಲೆ ಬಂದವರು ಧೃತಿಗೆಬೇಕಾದ ಅಗತ್ಯವಿಲ್ಲ. ನಾನೂ ಕೂಡ 25 ವರ್ಷಗಳ ಹಿಂದೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದೆ. ಇನ್ನೂ 25 ವರ್ಷಗಳ ಕಾಲ ನಾನು ಬದುಕುತ್ತೇನೆ ಎಂಬ ಭರವಸೆಯಿದೆ. ನಾವು ಮಾನಸಿಕವಾಗಿ ಎಷ್ಟು ಗಟ್ಟಿಯಾಗಿರತ್ತೇವೋ ಅಷ್ಟರ ಮಟ್ಟಿಗೆ ನಮ್ಮ ಆಯಸ್ಸು ಗಟ್ಟಿಯಾಗಿರುತ್ತದೆ. ನಮ್ಮ ಆಯಸ್ಸು ಮುಗಿದುಹೋಯಿತು ಎಂದು ಯಾರು ಅಂದುಕೊಳ್ಳಬಾರದು ಎಂದು ಹೇಳಿದರು.

ಈ ಹಿಂದೆ, ಜನರಲ್ಲಿ ಕ್ಷಯರೋಗವೂ ಪತ್ತೆಯಾಗದೇ ಮಾರಣಾಂತಿಕವಾಗಿತ್ತು. ಆದರೆ ಈಗ ಆಧುನಿಕ ಸೌಲಭ್ಯಗಳಿಂದ ಇಂತಹ ರೋಗಗಳಿಂದ ಗುಣಮುಖರಾಗಬಹುದಾಗಿದೆ. ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು, ಇದರಿಂದ ರೋಗಗಳನ್ನು ಮುಂಚಿತವಾಗಿ ಪತ್ತೆಹಚ್ಚಲು ಅನುಕೂಲವಾಗುತ್ತದೆ. ಆಗಮಾತ್ರ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಆರೋಗ್ಯ ಸದೃಢವಾಗಿದ್ದರೆ, ದೇಶದ ಅಭಿವೃದ್ಧಿಯಲ್ಲಿ ಜನರೂ ಕೊಡುಗೆ ನೀಡಬಹುದು. ಜೀವನ ಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಗಮನ ಹರಿಸಿ ಎಂಬುದು ನನ್ನ ಸಲಹೆ ಎಂದು ತಿಳಿಸಿದರು.

Ramesh Babu

Journalist

Recent Posts

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

2 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

10 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

13 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

16 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

17 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

19 hours ago