Categories: ಕೋಲಾರ

ಡೊನೇಷನ್ ಹಾವಳಿ ತಡೆಗಟ್ಟಲು ಎಸ್ಎಫ್ಐ ಅಗ್ರಹ

ಕೋಲಾರ: ಜಿಲ್ಲೆಯಾದ್ಯಂತ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ತಡೆಗಟ್ಟಿ, ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿದ ಶಾಲೆಗಳ ಮಾನ್ಯತೆ ರದ್ದುಮಾಡುವ ಜೊತೆಗೆ ಅಧಿಕೃತ ಶಾಲೆಗಳ ಪಟ್ಟಿಯನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಅಗ್ರಹಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿಯಿಂದ ತಹಶಿಲ್ದಾರ್ ನಾಗವೇಣಿ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಅಂಬ್ಲಿಕಲ್ ಶಿವಪ್ಪ ಮಾತನಾಡಿ, ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸೇರಿದಂತೆ ಬೋಧನಾ ಶುಲ್ಕವನ್ನು ಹೆಚ್ಚಳ ಮಾಡಿ ಡೊನೇಷನ್ ಹೆಸರಿನಲ್ಲಿ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಇದನ್ನು ಕರ್ನಾಟಕ ರಾಜ್ಯಾದ್ಯಂತ ಭಾರತ ವಿದ್ಯಾರ್ಥಿ ಫೆಡರೇಷನ್ ತೀವ್ರವಾಗಿ ಖಂಡಿಸುತ್ತದೆ. ಸರಕಾರ ಇದ್ದು ಕಣ್ಣು ಕುರುಡರ ರೀತಿಯಲ್ಲಿ ವರ್ತಿಸುತ್ತಾ ಇದ್ದು ಇದಕ್ಕೆ ಪೋಷಕರು ಬೆಲೆ ಕಟ್ಟಬೇಕಾಗಿದೆ ಎಂದರು.

ರಾಜ್ಯದಲ್ಲಿ ಇರುವ ಬಹುತೇಕ ಎಲ್ಲಾ ಖಾಸಗಿ ಶಾಲೆಗಳು ಈಗಾಗಲೇ ಬೇಬಿ ಕ್ಲಾಸಿನಿಂದ ಎಲ್ಲಾ ತರಗತಿಯ ಪ್ರವೇಶಯನ್ನು ಪ್ರಾರಂಭಿಸಿ ವಿದ್ಯಾರ್ಥಿಗಳು ಪಾಲಕರಿಂದ ಡೊನೇಷನ್ ವಸೂಲಿಗೆ ಮುಂದಾಗಿವೆ. ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾದರು ರಾಜ್ಯದಲ್ಲಿನ ಶಿಕ್ಷಣ ಇಲಾಖೆಯ ಆಯುಕ್ತರು, ಅಪರ ಆಯುಕ್ತರು, ವಿವಿಧ ಜಿಲ್ಲೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೌನವಾಗಿದ್ದಾರೆ. ಸರ್ಕಾರ ಇನ್ನು ಈ ವರ್ಷದ ಶೈಕ್ಷಣಿಕ ಪ್ರವೇಶಾತಿಯನ್ನು ಪ್ರಾರಂಭ ಮಾಡದಿದ್ದರೂ ಖಾಸಗಿ ಶಾಲೆಗಳು ಈಗಾಗಲೇ ಪ್ರವೇಶಾತಿ, ವಿವಿಧ ಶುಲ್ಕಗಳ ಹೆಸರಿನಲ್ಲಿ ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರದ 1983 ಶಿಕ್ಷಣ ಕಾಯ್ದೆಯನ್ನು ಉಲ್ಲಂಘನೆ ಮಾಡಿ ರಾಜ್ಯದ ಬಹುತೇಕ ಶಾಲೆಗಳಲ್ಲಿ ಬಟ್ಟೆ, ಶೂ ಸಾಕ್ಸ್, ನೋಟ್ ಬುಕ್ಸ್ ಗಳನ್ನು, ಶಾಲೆಗಳಲ್ಲಿ ಮಾರಾಟ ಮಾಡುತ್ತಿರುವುದು ಕಾನೂನುಬಾಹಿರ ಹಾಗೂ ಶಿಕ್ಷಣ ಇಲಾಖೆಯ 1983 ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿರುವ ಶಾಲೆಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಕೇವಲ ಬೋಧನ ಶುಲ್ಕ ಮಾತ್ರ ತೆಗೆದುಕೊಳ್ಳಲು ಆದೇಶ ಮಾಡಿ ಯಾವುದೇ ಕಾರಣಕ್ಕೂ ಆನ್‌ಲೈನ್ ಶಿಕ್ಷಣ ನೀಡುವುದು ಸರಿಯಾದ ಕ್ರಮವಲ್ಲ. 1983ರ ಶಿಕ್ಷಣ ಕಾಯಿದೆ ಪ್ರಕಾರ ಎಲ್ಲಾ ಖಾಸಗಿ ಶಾಲೆಗಳು ಪ್ರವೇಶಾತಿಗೆ ಖಾಲಿ ಇರುವ ಸೀಟುಗಳನ್ನು ತಮ್ಮ ಶಾಲೆಯ ನೋಟಿಸ್ ಬೋರ್ಡ್ಗೆ ಹಾಕಬೇಕು, ಮತ್ತು ರೋಸ್ಟರ್ ನಿಯಮ ಜಾರಿ ಮಾಡಿ, ಶುಲ್ಕವನ್ನು ನಿಗದಿಗೊಳಿಸಿ ಶಾಲೆಯ ಮುಂಭಾಗದಲ್ಲಿ ಹಾಕಬೇಕೆಂದು ನಿಯಮ ಇದ್ದರು ರಾಜ್ಯದಲ್ಲಿ ಯಾವ ಶಾಲೆಗಳು ಸಹ ಜಾರಿಮಾಡಿರುವುದಿಲ್ಲ ಎಂದು ಆರೋಪಿಸಿದರು.

ಇದಕ್ಕೆ ಸಂಬಂಧಿಸಿದಂತೆ ಅನೇಕ ಬಾರಿ ವಿವಿಧ ಜಿಲ್ಲೆಗಳಲ್ಲಿ ಸಂಬಂಧಪಟ್ಟ ಸ್ಥಳೀಯ ಡಿ.ಡಿ.ಪಿ.ಐ, ಹಾಗೂ ಬಿ.ಇ.ಒ ರವರಿಗೆ ಎಸ್‌ಎಫ್‌ಐ ಸಂಘಟನೆಯ ಕಾರ್ಯಕರ್ತರು ಮನವಿ ಮಾಡಿದರು. ಕ್ರಮ ಜರುಗಿಸಲು ಮುಂದಾಗಿಲ್ಲ ಸರ್ಕಾರದ ಅಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಮಾಡಲು ಹಿಂದೇಟು ಹಾಕುವುದು ಯಾಕೆ ಖಾಸಗಿ ಶಾಲೆಗಳ ಜೊತೆ ನಿಮ್ಮ ಇಲಾಖೆಯ ಅಧಿಕಾರಿಗಳು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಅನುಮಾನ ಬರುತ್ತದೆ ಕೂಡಲೇ ಅಂತಹ ಶಾಲೆಗಳ ಮೇಲೆ ಕಾನೂನು ಕ್ರಮ ಜರುಗಿಸಿ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ರೇಗುಲೇಟಿಂಗ್ ಪ್ರಾಧಿಕಾರ ರಚಿಸಿ, ಶಾಲೆಗಳ ಮೇಲೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು ಈ ಸಂದರ್ಭದಲ್ಲಿ ಎಸ್‌ಎಫ್‌ಐ ಮುಖಂಡರಾದ ಶಶಿಕುಮಾರ್, ಪ್ರವೀಣ್, ದೇವರಾಜ್, ಮಹೇಶ್, ಹರಿಪ್ರಸಾದ್ ಇದ್ದರು

Ramesh Babu

Journalist

Recent Posts

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 hour ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

3 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

11 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

13 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

21 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

1 day ago