ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಧರ್ಮವರಂ ಮೂಲದ ಕೆ. ಜಯಪ್ರಕಾಶ್ (25) ಎಂದು ಗುರುತಿಸಲಾಗಿದೆ.

ಪೊಲೀಸ್ ಮಾಹಿತಿಯ ಪ್ರಕಾರ, ಬೈಕ್‌ಗೆ ಹಿಂಬದಿಯಿಂದ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್‌ಗೆ ಬಡಿದಿದೆ. ಈ ವೇಳೆ ಜಯಪ್ರಕಾಶ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಯಪ್ರಕಾಶ್ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪ್ರದೇಶಕ್ಕೆ ಸಿಪಿಯು ದುರಸ್ತಿಗೆ ತೆರಳಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೈಕ್‌ನಲ್ಲಿದ್ದ ಮತ್ತೊಬ್ಬ ಸವಾರನನ್ನು ಸ್ಥಳೀಯರು ರಕ್ಷಿಸಿದ್ದು, ಗಂಭೀರ ಗಾಯಗಳಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರನ್ನೂ ತಕ್ಷಣ ದೇವನಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಘಟನೆ ಹಿನ್ನೆಲೆಯಲ್ಲಿ ಜಯಪ್ರಕಾಶ್ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಜಿಲ್ಲೆಯಲ್ಲಿ ಪಾತಾಳ ಮುಟ್ಟಿದ ಅಂತರ್ಜಲ! ಕೊಳವೆಬಾವಿಗಳ ಅತಿಯಾದ ಬಳಕೆ, ಮಳೆ ಕೊರತೆ; 1,250 ಅಡಿಯಲ್ಲೂ ನೀರು ಸಿಗುವುದು ಅನುಮಾನ

ಬೆಂಗಳೂರು ಗ್ರಾಮಾಂತರ: ಯಾವುದೇ ನದಿ ಮೂಲವಿಲ್ಲದ ಬಯಲುಸೀಮೆ ಪ್ರದೇಶವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲದ ಮೇಲಿನ ಅವಲಂಬನೆ ವರ್ಷದಿಂದ ವರ್ಷಕ್ಕೆ…

9 hours ago

ಕಸಾಪ ಪುನಶ್ಚೇತನಕ್ಕೆ ಚಿಂತನೆ: ಡಾ. ಸಿ. ಸೋಮಶೇಖರ್

ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತನ್ನು ಕನ್ನಡಿಗರ ಸ್ವಾಭಿಮಾನದ ಗೌರವ ಸಂಸ್ಥೆಯಾಗಿ ರೂಪಿಸುವುದರ ಜೊತೆಗೆ, ಪರಿಷತ್ತಿಗೆ ಕಾಯಕಲ್ಪ ನೀಡುವ ಉದ್ದೇಶ ಹೊಂದಲಾಗಿದೆ…

10 hours ago

3.75 ಲಕ್ಷ ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ: ಇ-ಕೆವೈಸಿಗೆ ಅ.20ರ ಗಡುವು: ಗಡುವು ವಿಸ್ತರಣೆಯಿಂದ ಫಲಾನುಭವಿಗಳಿಗೆ ಕೊಂಚ ನಿರಾಳ

ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು…

21 hours ago

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

1 day ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

1 day ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

2 days ago