ಡ್ರಗ್ಸ್ ತೆಗೆದುಕೊಳ್ಳುವುದು ಬೇಡ ಡಾರ್ಲಿಂಗ್ಸ್: ‘Say No To Drugs’- ರೆಬೆಲ್ ಸ್ಟಾರ್ ಪ್ರಭಾಸ್ ಮನವಿ

ಟಾಲಿವುಡ್ ನಟ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ವರ್ಷದ ಮುನ್ನಾದಿನದಂದು ಮಾದಕ ದ್ರವ್ಯ ಮುಕ್ತ ಸಮಾಜವನ್ನು ನಿರ್ಮಿಸುವ ತೆಲಂಗಾಣ ಸರ್ಕಾರದ ಮಿಷನ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

“ನಮಗೆ ಜೀವನದಲ್ಲಿ ತುಂಬಾ ಸಂತೋಷಗಳಿವೆ, ನಮ್ಮಲ್ಲಿ ನಮ್ಮನ್ನು ಪ್ರೀತಿಸುವ ಜನರು ಮತ್ತು ನಮಗಾಗಿ ಬದುಕುವ ಕುಟುಂಬ ಸದಸ್ಯರಿದ್ದಾರೆ. ಆದ್ದರಿಂದ ಡ್ರಗ್ಸ್ ನಿಜವಾಗಿಯೂ ಅಗತ್ಯವಿದೆಯೇ ಡಾರ್ಲಿಂಗ್ಸ್ (ಪ್ರಭಾಸ್ ತಮ್ಮ ಅಭಿಮಾನಿಗಳನ್ನು ಪ್ರೀತಿಯಿಂದ ಡಾರ್ಲಿಂಗ್ಸ್ ಎಂದು ಕರೆಯುತ್ತಾರೆ)… ಇಂದೇ ಡ್ರಗ್ಸ್ ಬಿಟ್ಟುಬಿಡಿ ಎಂದು ಮನವಿ ಮಾಡಿದ್ದಾರೆ.

ನಿಮಗೆ ಯಾರಾದರು ಡ್ರಗ್ಸ್ ತೆಗೆದುಕೊಳ್ಳುವವರು ತಿಳಿದಿದ್ದರೆ. ಯಾರಾದರು ಮಾದಕ ವ್ಯಸನಿಗಳಾಗಿದ್ದರೆ, ನೀವು ಟೋಲ್-ಫ್ರೀ ಸಂಖ್ಯೆ 8712671111 ಗೆ ಕರೆ ಮಾಡಬಹುದು. ತೆಲಂಗಾಣ ಸರ್ಕಾರವು ಈ ಚಟವನ್ನು ಬಿಡಿಸಿ ಚೇತರಿಸಿಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ.” ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

3 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 day ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago