ತಂಗುದಾಣಗಳಿಲ್ಲದ ನಗರ ದೊಡ್ಡಬಳ್ಳಾಪುರ: ಬಿಸಿಲು-ಮಳೆಗೆ ಬಸವಳಿವ ಪ್ರಯಾಣಿಕರು

ದೊಡ್ಡಬಳ್ಳಾಪುರ: ದಿನೇ ದಿನೇ ತನ್ನ ಎಲ್ಲೆ ವಿಸ್ತರಿಸಿಕೊಂಡು ರಾಜ್ಯ ರಾಜಧಾನಿಗೆ ದೊಡ್ಡಬಳ್ಳಾಪುರ ನಗರ ಹತ್ತಿರವಾಗುತ್ತಿದೆ. ಏಷ್ಯಾದ ಎರಡನೇ‌ ಅತಿ‌ ದೊಡ್ಡ ಕೈಗಾರಿಕಾ ಪ್ರದೇಶ, ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳು, ಪ್ರವಾಸಿ ತಾಣಗಳಿಂದಾಗಿ ಲಕ್ಷಾಂತರ ಜನರನ್ನು ಈ‌ ನಗರವು ಆಕರ್ಷಿಸುತ್ತಿದೆ.

ದೀಪದ ಬುಡದಲ್ಲಿ ಕತ್ತಲು ಎಂಬಂತೆ ರಾಜಧಾನಿಗೆ ಕೂಗಳತೆ ದೂರದಲ್ಲೇ ಇದ್ದರೂ ಅಭಿವೃದ್ಧಿ ಹಾಗೂ ಮೂಲಭೂತ‌ ಸೌಕರ್ಯ ಕೊರತೆಯಿಂದಾಗಿ ಸೊರಗುತ್ತಿದೆ.

ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿ, ದಾಬಸ್ ಪೇಟೆ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದ್ದರೂ ನಗರ ಭಾಗದಲ್ಲಿ ಎಲ್ಲಿಯೂ ಪ್ರಯಾಣಿಕರಿಗೆ ತಂಗುದಾಣ ಇಲ್ಲದಂತಾಗಿದೆ.

ನಗರದಿಂದ ತುಮಕೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಹೊಸಕೋಟೆ, ದೇವನಹಳ್ಳಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಹಿಂದೂಪುರ ಮಾರ್ಗವಾಗಿ ನಿತ್ಯ ನೂರಾರು ರಾಜ್ಯ ಹಾಗೂ ಅಂತಾರಾಜ್ಯ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಅದೇ ರೀತಿ ಪ್ರಯಾಣಿಕರ ದಟ್ಟಣೆಯೂ ಹೆಚ್ಚುತ್ತಿದೆ. ಆದರೆ, ಪ್ರಯಾಣಿಕರು ಬಿಸಿಲು-ಮಳೆಗೆ ಮೈಯೊಡ್ಡಿ ಬಸ್ಸಿಗಾಗಿ ಕಾದು ಕಾದು ನಿತ್ರಾಣರಾಗುವ ಸ್ಥಿತಿ ನಿರ್ಮಾಣವಾಗಿದೆ.

ರೈಲ್ವೆ ನಿಲ್ದಾಣ, ಟಿ.ಬಿ.ವೃತ್ತದ ಚಿಕ್ಕಬಳ್ಳಾಪುರ ಮಾರ್ಗದಲ್ಲಿ  ತಂಗುದಾಣ ಇದ್ದರೂ ಪ್ರಯಾಣಿಕರು ಬಳಸುವಂತೆ ಇಲ್ಲ.

ನಗರದಲದಲಿರುವ ತಾಲೂಕು ಕಚೇರಿ, ಆಸ್ಪತ್ರೆ, ಬ್ಯಾಂಕ್, ಕೋರ್ಟ್, ಶಾಲಾ- ಕಾಲೇಜು, ಉಪವಿಭಾಗಾಧಿಕಾರಿ ಕಚೇರಿ, ಕಾರ್ಖಾನೆ ಕೆಲಸಗಳಿಗೆ ಬಂದು ಹೋಗುವ ಪ್ರಯಾಣಿಕರು ರಸ್ತೆ ಇಕ್ಕೆಲಗಳಲ್ಲಿ ನಿಂತು ನರಕಯಾತನೆ ಅನುಭವಿಸಬೇಕಾಗಿದೆ.

ಬಸ್ಸಿಗಾಗಿ ಕಾಯುವ ಪ್ರಯಾಣಿಕರಲ್ಲಿ ಅಂಗವಿಕಲರು, ಮಕ್ಕಳು, ವೃದ್ಧರು, ಮಹಿಳೆಯರು, ರೋಗಿಗಳು‌, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಬಿಸಿಲಲ್ಲೇ ನಿಲ್ಲಬೇಕಾಗಿದೆ.

ನಗರದಲ್ಲಿ ತಂಗುದಾಣ ಇಲ್ಲದೇ ಇರುವ ಕಾರಣ ಕೆಲ ಬಸ್ ಗಳು ನಿಲುಗಡೆ ಮಾಡದೇ ಹೋರಟು ಹೋಗುತ್ತವೆ. ಆಗ ಬಸ್ಸಿಗಾಗಿ ಗಂಟೆಗಟ್ಟಲೇ ಕಾದು ಕುಳಿತ ಪ್ರಯಾಣಿಕರು ಮತ್ತೆ ರಸ್ತೆಯಲ್ಲೇ ಇನ್ನಷ್ಟು ಸಮಯ ಕಳೆಯಬೇಕಾದ ದುಸ್ಥಿತಿ ನಿರ್ಮಾಣವಾಗುತ್ತಿದೆ. ಪ್ರಯಾಣಿಕರು ರಸ್ತೆಯಲ್ಲೇ ಬಸ್ಸಿಗೆ ನಿಲ್ಲುತ್ತಿರುವುದರಿಂದ ಕೆಲವೊಮ್ಮೆ ಅಪಘಾತಗಳು ಸಂಭವಿಸುತ್ತಿವೆ.

ನಗರದ ಅಭಿವೃದ್ಧಿಗೆ ಕೋಟ್ಯಂತರ ರೂ.ಖರ್ಚು ಮಾಡುವ ಜನಪ್ರತಿನಿಧಿಗಳು, ತಾಲೂಕು ಆಡಳಿತ, ನಗರಸಭೆ ಅಧಿಕಾರಿಗಳಿಗೆ ತಂಗುದಾಣ ನಿರ್ಮಿಸಬೇಕೆಂಬ ಕನಿಷ್ಠ ಕಾಳಜಿ ಇಲ್ಲದಿರುವುದು ದೊಡ್ಡಬಳ್ಳಾಪುರದ ಜನರ ದೌರ್ಭಾಗ್ಯವೇ ಸರಿ. ಇನ್ನಾದರೂ ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತುಕೊಂಡು ಸೂಕ್ತ ಹಾಗೂ ಪ್ರಯಾಣಿಕ ಸ್ನೇಹಿ ತಂಗುದಾಣ ನಿರ್ಮಿಸಬೇಕೆಂಬುದು ಜನರ ಒಕ್ಕೊರಲ ಆಗ್ರಹವಾಗಿದೆ.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

4 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

6 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

7 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

13 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

14 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

17 hours ago