ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ, ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧ ಹೊಂದಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದ ಅವರು, ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು. ನಿಮ್ಮ ಶ್ರಮ ಮತ್ತು ಸೇವೆ ಶ್ಲಾಘನೀಯ ಎಂದು ಹೇಳಿದರು.
ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು. ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ತಿಳಿಸಿದರು.
ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು.
ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು ಎಂದರು.
ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಹೆಮ್ಮೆಯ ವಿಷಯ ಎಂದರು.
ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ಧ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ಧವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದರು.
ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…