Categories: ವಿಜಯಪುರ

ತಂದೆಯಿಂದಲೇ 6 ವರ್ಷದ ಮಗನ ಕೊಲೆ: ಕಾರಣ ಏನು ಗೊತ್ತಾ….?

ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ.‌

ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ ಇಲ್ಲ ಎಂಬ ಕಾರಣಕ್ಕೆ ಹತ್ಯೆ ಮಾಡಿದ್ದಾನೆ.

ವಿಜಯಪುರ ಜಿಲ್ಲೆ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6) ಹತ್ಯೆಯಾದ ಬಾಲಕ.

ಮಲ್ಲಿಕಾರ್ಜುನ ಅರಕೇರಿ ಮಗನನ್ನೇ ಹತ್ಯೆ ಮಾಡಿದ ಪಾಪಿ ತಂದೆ.

6 ವರ್ಷದ ಪುತ್ರ ಸಿದ್ದಾರ್ಥ ನೋಡಲು ನಿನ್ನಂತಿಲ್ಲ, ನಿನ್ನ ಒಂದು ಹೋಲಿಕೆಯೂ ಇಲ್ಲ ಎಂದು ಮಲ್ಲಿಕಾರ್ಜುನ ಅರಕೇರಿಗೆ ಗ್ರಾಮದಲ್ಲಿ ಕೆಲವರು ನಿತ್ಯ ಚೇಡಿಸಿದ್ದರಂತೆ. ಇದರಿಂದಾಗಿ ರೋಸಿಹೋದ ಮಲ್ಲಿಕಾರ್ಜುನ ತನ್ನ 6 ವರ್ಷದ ಪುತ್ರ ಸಿದ್ದಾರ್ಥನನ್ನು ಕಳೆದ ಮಾರ್ಚ್ 16 ರಂದು ಮಹಾರಾಷ್ಟ್ರದ ಕರಾಡ್ ಜಿಲ್ಲೆ ವಡೋಲಿ ಬಳಿ ಕೃಷ್ಣಾ ನದಿ ಬಳಿ ಕರೆದುಕೊಂಡು ಹೋಗಿ ಮಗುವನ್ನ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ..

ಬಳಿಕ ಮಗನನ್ನು‌ ಸಿಂದಗಿ ಬಳಿ ಶಾಲೆಗೆ ಸೇರಿಸಿ ಹಾಸ್ಟೆಲ್ ನಲ್ಲಿ ಇಟ್ಟಿದ್ದಾಗಿ ತಿಳಿಸಿದ್ದಾನೆ. ಏಪ್ರಿಲ್ 1 ರಂದು ಮಗನ ಹುಟ್ಟುಹಬ್ಬದ ದಿನ ಕರೆದುಕೊಂಡು ಬರುವಂತೆ ತಾಯಿ ಭಾಗ್ಯಶ್ರಿ ಪಟ್ಟುಹಿಡಿದಿದ್ದಾರೆ.

ಮಗ ಎಲ್ಲಿದ್ದಾನೆ ಎಂದು ಕೇಳಿದಾಗ ಮಲ್ಲಿಕಾರ್ಜುನ ಮನೆಯಿಂದ ಓಡಿ ಹೋಗಿದ್ದಾನೆ. ಇದರಿಂದಾಗಿ ಅನುಮಾನ ಬಂದು ಪೊಲೀಸರಿಗೆ ತಾಯಿ ದೂರು ನೀಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಕೊಲೆ ಮಾಡಿರುವುದು ಬಹಿರಂಗ ಮಾಡಿದ್ದಾನೆ. ಮಹಾರಾಷ್ಟ್ರದಲ್ಲಿ ಕೊಲೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾನೆ.

ಮಾರ್ಚ್ 16 ರಂದು ಕರಾಡ್ ನ ಮಸೂರು ಠಾಣೆ ಪೊಲೀಸರು ಅಪರಿಚಿತ ಬಾಲಕನ ಶವದ ಬಗ್ಗೆ ಪ್ರಕಟಣೆ ಹೊರಡಿಸಿದ್ದರು. ಈ ಪ್ರಕಟಣೆ ಹಾಗೂ ಮಲ್ಲಿಕಾರ್ಜುನ ನೀಡಿದ ಹೇಳಿಕೆ ಆಧಾರದ ಮೇಲೆ‌ ಬಾಲಕನ ಶವ ಪತ್ತೆ ಮಾಡಲಾಗಿದೆ.

ತನಿಖೆ ವೇಳೆ ಬಾಲಕನ ಹತ್ಯೆ ಮಾಡಿರೋದು ಬೆಳಕಿಗೆ ಬಂದಿದೆ…

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

21 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 day ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

2 days ago