ತಂದೆ-ತಾಯಿ ಹೇಳಿದ ಬುದ್ಧಿ ಮಾತಿಗೆ ಮನನೊಂದ ಮಗ ನೇಣಿಗೆ ಶರಣು..?

ತಂದೆ-ತಾಯಿ ಹೇಳಿದ ಬುದ್ಧಿ‌ ಮಾತಿಗೆ ಮನನೊಂದ ಯುವಕ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಮಾಡೇಶ್ವರ ಗ್ರಾಮ ಸಮೀಪವಿರುವ ಹುಲುಕುಡಿ ಬೆಟ್ಟದ ತಪ್ಪಲಿನಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ.

ಮಾಡೇಶ್ವರ ಗ್ರಾಮದ ನಿಖಿಲ್ ಕುಮಾರ್.ಎಸ್(28) ನೇಣಿಗೆ ಶರಣಾದ ಯುವಕ.

ಕಳೆದ ಎರಡು ತಿಂಗಳ ಹಿಂದೆ ಖಾಸಗಿ ಕಂಪನಿಯಲ್ಲಿ ಮಾಡುತ್ತಿದ್ದ ಕೆಲಸವನ್ನು ಬಿಟ್ಟು ಮನೆಯಲ್ಲಿದ್ದ ಹಸುಗಳನ್ನು ಮೇಯಿಸುತ್ತಿದ್ದ. ಈ ವೇಳೆ ಸಾಲ ಮಾಡಿ ಒಂದು ಬೈಕನ್ನು ಖರೀದಿ ಮಾಡಿದ್ದನು. ಸಾಲ ಮಾಡಿ ಬೈಕ್ ಏಕೆ ಖರೀದಿ ಮಾಡಿದೆ. ಮಾಡಿರುವ ಸಾಲವನ್ನು ಹೇಗೆ ತೀರಿಸುತ್ತೀಯ ಎಂದು ತಂದೆ-ತಾಯಿ ಕೇಳಿದ್ದರು. ಈ ಕಾರಣಕ್ಕೆ ಮನನೊಂದ ಯುವಕ ನಿನ್ನೆ ಮಧ್ಯಾಹ್ನ ಹಸು ಮೇಯಿಸಲು ಹೋಗಿ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ ಎಂದು ಮೂಲಗ ಳಿಂದ‌ತಿಳಿದು ಬಂದಿದೆ.

ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

4 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

9 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

12 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago