ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಮೂಲಕ ಮಹತ್ವದ ತೀರ್ಪು ಪ್ರಕಟಿಸಿದೆ.

ಇದನ್ನು ಅತ್ಯಂತ ಅಪರೂಪದ ಅಪರಾಧ ಎಂದು ಕರೆದಿರುವ ನ್ಯಾಯಾಲಯ ಇದು ಅತ್ಯಂತ ಕ್ರೂರತೆ ಮತ್ತು ಅಧಿಕಾರ ದುರುಪಯೋಗವನ್ನು ಸಾಬೀತುಪಡಿಸುತ್ತದೆ. ಹೀಗಾಗಿ, ಆರೋಪಿಗಳಾದ ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ ಎಂದು ಹೇಳಿದೆ.

ಚೆನ್ನೈ, ಏಪ್ರಿಲ್ 6: 2020ರಲ್ಲಿ ಕೊರೊನಾ (Covid-19) ಅವಧಿಯಲ್ಲಿ ರಾತ್ರಿಯಿಡೀ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ತಮಿಳುನಾಡಿನ (Tamil Nadu) ತೂತುಕುಡಿ ಜಿಲ್ಲೆಯ ಸಾಥನ್‌ಕುಲಂನಲ್ಲಿ ಅಂಗಡಿ ಮಾಲೀಕ ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಸಾಥನ್‌ಕುಲಂ ಪೊಲೀಸರು ಕ್ರೂರವಾಗಿ ಥಳಿಸಿದ್ದರು. ಕಸ್ಟಡಿಯಲ್ಲಿದ್ದಾಗ ಅವರಿಗೆ ಚಿತ್ರಹಿಂಸೆ ನೀಡಿದ್ದರಿಂದ ಅವರಿಬ್ಬರೂ ಪೊಲೀಸ್ ಠಾಣೆಯಲ್ಲೇ ಮೃತಪಟ್ಟಿದ್ದರು. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಮಗ್ರ ತನಿಖೆ ನಡೆಸಿ 2,427 ಪುಟಗಳ ಚಾರ್ಜ್‌ಶೀಟ್ ಅನ್ನು ಮಧುರೈ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಅದರ ಆಧಾರದ ಮೇಲೆ ತಂದೆ-ಮಗನ ಲಾಕಪ್ ಡೆತ್ ಪ್ರಕರಣದಲ್ಲಿ ಬಂಧಿತರಾದ ಎಲ್ಲಾ 9 ಪೊಲೀಸರು ತಪ್ಪಿತಸ್ಥರೆಂದು ಕೋರ್ಟ್ ಘೋಷಿಸಿತ್ತು. ಇಂದು ಅವರ ಶಿಕ್ಷೆಯ ಪ್ರಮಾಣ ಪ್ರಕಟವಾಗಿದ್ದು, ಎಲ್ಲ ಆರೋಪಿಗಳಿಗೂ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಈ ಘಟನೆ ನಡೆದು 6 ವರ್ಷಗಳ ವಿಚಾರಣೆಯ ನಂತರ ಇಂದು ತೀರ್ಪು ಹೊರಬಿದ್ದಿದೆ. ವ್ಯಾಪಾರಿ ಪಿ. ಜಯರಾಜ್ (59) ಮತ್ತು ಅವರ ಮಗ ಜೆ. ಬೆನ್ನಿಕ್ಸ್ (31) ಅವರ ಸಾವಿನ ಪ್ರಕರಣದಲ್ಲಿ ಕೊಲೆ ಮತ್ತು ಸಂಬಂಧಿತ ಅಪರಾಧಗಳಲ್ಲಿ 9 ಆರೋಪಿಗಳನ್ನು ತಪ್ಪಿತಸ್ಥರೆಂದು ನ್ಯಾಯಾಧೀಶ ಜಿ ಮುತ್ತುಕುಮಾರನ್ ತೀರ್ಪು ನೀಡಿದ್ದಾರೆ. ಕಸ್ಟಡಿಯಲ್ಲಿದ್ದಾಗ ಪೂರ್ವನಿಯೋಜಿತವಾಗಿ ಪ್ಲಾನ್ ಮಾಡಿ ರಾತ್ರಿಯಿಡೀ ಚಿತ್ರಹಿಂಸೆಯನ್ನು ನೀಡಲಾಗಿದೆ ಎಂಬ ಕೇಂದ್ರ ತನಿಖಾ ದಳದ (ಸಿಬಿಐ) ವಾದವನ್ನು ನ್ಯಾಯಾಲಯ ಸ್ವೀಕರಿಸಿದೆ. ಹೀಗಾಗಿ, ಗರಿಷ್ಠ ಶಿಕ್ಷೆಯನ್ನು ವಿಧಿಸಲಾಗಿದೆ.

ಗಲ್ಲು ಶಿಕ್ಷೆಗೊಳಗಾದವರಲ್ಲಿ ಇನ್ಸ್‌ಪೆಕ್ಟರ್ ಎಸ್. ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಪಿ. ರಘು ಗಣೇಶ್ ಮತ್ತು ಕೆ. ಬಾಲಕೃಷ್ಣನ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಎಸ್. ಮುರುಗನ್ ಮತ್ತು ಎ. ಸಮದುರೈ, ಕಾನ್‌ಸ್ಟೆಬಲ್‌ಗಳಾದ ಎಂ. ಮುತ್ತುರಾಜ್, ಎಸ್. ಚೆಲ್ಲಾದುರೈ, ಎಕ್ಸ್. ಥಾಮಸ್ ಫ್ರಾನ್ಸಿಸ್ ಮತ್ತು ಎಸ್. ವೇಲುಮುತ್ತು ಸೇರಿದ್ದಾರೆ. ಹತ್ತನೇ ಆರೋಪಿಯಾದ ವಿಶೇಷ ಸಬ್ ಇನ್ಸ್‌ಪೆಕ್ಟರ್ ಪೌಲ್ದುರೈ, ವಿಚಾರಣೆಯ ಸಮಯದಲ್ಲಿ ಕೊವಿಡ್​​-19ನಿಂದ ನಿಧನರಾಗಿದ್ದಾರೆ.

Ramesh Babu

Journalist

Recent Posts

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

2 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

5 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

7 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

8 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

8 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

14 hours ago