ತಂಬಾಕು ಬಳಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್

 

ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ ಅಂಗಡಿ ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಇನ್ನೂ ಹೆಚ್ಚು ಕಾರ್ಯ ಪ್ರವೃತ್ತರಾಗಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಶಿವಶಂಕರ್ ‌.ಎನ್ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ ಹಾಗೂ ಮಿಷನ್ ಇಂದ್ರಧನುಷ್ 5.0 ಮತ್ತು ದಡಾರ ಮತ್ತು ರುಬೆಲ್ಲಾ ನಿರ್ಮೂಲನೆ ಕುರಿತು ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು ಹಾಗೂ ತಂಬಾಕು ನಿಯಂತ್ರಣ ಕಾನೂನು ಕೊಟ್ಪಾ 2003ರ ಕಾಯ್ದೆ ಬಗ್ಗೆ ಶಾಲಾ ಮಕ್ಕಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಿ. ಸಾರ್ವಜನಿಕ ಸ್ಥಳಗಳಲ್ಲಿ,ಶಾಲಾ ಕಾಲೇಜುಗಳಲ್ಲಿ, ಅಂಗಡಿಗಳಲ್ಲಿ ಕೈಗಾರಿಕೆಗಳಲ್ಲಿ ತಂಬಾಕು ಸೇವನೆ ನಿಷೇಧ ಬಗೆಗಿನ ನಾಮಫಲಕಗಳನ್ನು ಪ್ರದರ್ಶಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಿ, ಯಾರು ಪ್ರದರ್ಶಿಸುತ್ತಿಲ್ಲ ಅಂತವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಂಬಾಕು ನಿಯಂತ್ರಣ ಕಾನೂನು- ಕೊಟ್ಪಾ 2003ರ ಕಾಯ್ದೆಯಂತೆ ಸೆಕ್ಷನ್ 04 ರ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ, ಇದರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಮಾಲೀಕರು ನಾಮಫಲಕಗಳನ್ನು ಪ್ರದರ್ಶಿಸಬೇಕು ಎಂದರು.

ಸೆಕ್ಷನ್ 05 ರ ಅಡಿಯಲ್ಲಿ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ಉತ್ತೇಜನ, ಪ್ರಾಯೋಜಕತೆ ನಿಷೇಧ ಮಾಡಲಾಗಿದೆ. ಇದರ ಅನ್ವಯ ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಅಂಗಡಿಗಳಲ್ಲಿ ತಂಬಾಕು ಜಾಹೀರಾತುಗಳನ್ನು ಬೋರ್ಡ್, ಭಿತ್ತಿ ಪತ್ರ, ಎಲ್ ಸಿ ಡಿ ಟಿವಿ ಗಳ ಮೂಲಕ ಪ್ರಚಾರ ಮಾಡುವಂತಿಲ್ಲ, ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಮೂಲಕ ತಂಬಾಕು ಉತ್ಪನ್ನಗಳ ಜಾಹೀರಾತು ಮಾಡುವಂತಿಲ್ಲ. ಸೆಕ್ಷನ್ 6 ರ ಅಡಿಯಲ್ಲಿ ತಂಬಾಕು ಉತ್ಪನ್ನಗಳನ್ನು 18 ವರ್ಷದೊಳಗಿನ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮಾರಾಟ ಮಾಡುವಂತಿಲ್ಲ. ಈ ಕಾನೂನುಗಳನ್ನು ಉಲ್ಲಂಘಿಸಿದಲ್ಲಿ ದಂಡ ಹಾಗೂ ಸೂಕ್ತ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ. ಸೆಕ್ಷನ್ 06 ಬಿ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳ ನೂರು ಅಡಿಯ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಸೆಕ್ಷನ್ 07 ರಲ್ಲಿ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ಶೇ. 85 ರಷ್ಟು ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವಂತಿಲ್ಲ ಎಂದು ಹೇಳಿದರು.

ತಂಬಾಕು ವ್ಯಸನಿಗಳನ್ನು ಹೆಚ್ಚು ಪತ್ತೆ ಮಾಡಿ ಸಮಾಲೋಚನೆ ನಡೆಸಿ, ತಂಬಾಕು ವ್ಯಸನ ಮುಕ್ತರನ್ನಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಿ ಎಂದರಲ್ಲದೆ, ಕಾನೂನು ಪಾಲಿಸದೆ ತಂಬಾಕು ವಸ್ತುಗಳನ್ನು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಅಂತವರಿಗೆ ಎಚ್ಚರಿಕೆ ನೀಡಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

2023ರ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮದ ಅಂಗವಾಗಿ 5 ವರ್ಷದ ಒಳಗಿನ ಮಕ್ಕಳಿಗೆ, ಗರ್ಭಿಣಿಯರಿಗೆ ಲಸಿಕೆ ನೀಡಲಾಗುತ್ತದೆ. ಲಸಿಕಾಕರಣ ಕ್ಯಾಂಪ್ ಮಾಡುವ ಮುಂಚಿತವಾಗಿ ಹೆಚ್ಚು ಪ್ರಚಾರ ಮಾಡಿ, ಪ್ರತಿಯೊಬ್ಬ ಮಗುವಿಗೂ ಕೂಡ ಲಸಿಕೆಯನ್ನು ತಪ್ಪದೆ ನೀಡಿ. ಇದುವರೆಗೂ ಲಸಿಕೆ ಪಡೆಯದ, ಲಸಿಕೆ ಪಡೆಯಲು ಬಾಕಿ ಇರುವಂತಹ ಪ್ರದೇಶ, ವಲಸೆ ಪ್ರದೇಶಗಳಲ್ಲಿ, ನಗರದ ಸ್ಲಂ ಪ್ರದೇಶದಲ್ಲಿ ಹೆಚ್ಚು ಗಮನ ಹರಿಸಿ ಹೆಚ್ಚು ಲಸಿಕಾಕರಣ ಮಾಡಿ ಎಂದರು. ಶಿಕ್ಷಣ ಇಲಾಖೆ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿ ಕಾರ್ಯಕ್ರಮ ಯಶಸ್ವಿಯಾಗಲು ಶ್ರಮಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

11 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

13 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

13 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

22 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

23 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

1 day ago