ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ ಅಂಗಡಿ-ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಹೆಚ್ಚು ಕಾರ್ಯ ಪ್ರವೃತ್ತರಾಗಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ.ಎನ್. ಶಿವಶಂಕರ್ ‌ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಂಬಾಕು ಮುಕ್ತ ದಿನ ಇರುವ ಕಾರಣದಿಂದಾಗಿ ಎಲ್ಲಾ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಛೇರಿಗಳನ್ನು ಮೇ 31 ರ ಒಳಗಾಗಿ ತಂಬಾಕು ಮುಕ್ತ ಸರ್ಕಾರಿ ಕಛೇರಿಗಳಾಗಿ ಮಾಡಲು ಸೂಚನೆ ನೀಡಿದರು.

ಜಿಲ್ಲಾ ಹಾಗೂ ತಾಲ್ಲೂಕು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯ ಪ್ರವೃತ್ತರಾಗಿ ತಂಬಾಕು ನಿಯಂತ್ರಣಕ್ಕೆ ಕ್ರಮವಹಿಸಲು ತಿಳಿಸಿದರು.

ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು ಹಾಗೂ ತಂಬಾಕು ನಿಯಂತ್ರಣ ಕಾನೂನು ಕೊಟ್ಪಾ 2003ರ ಕಾಯ್ದೆ ಬಗ್ಗೆ ಶಾಲಾ ಮಕ್ಕಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಿ. ಸಾರ್ವಜನಿಕ ಸ್ಥಳಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ಅಂಗಡಿಗಳಲ್ಲಿ ಕೈಗಾರಿಕೆಗಳಲ್ಲಿ ತಂಬಾಕು ಸೇವನೆ ನಿಷೇಧ ಬಗೆಗಿನ ನಾಮಫಲಕಗಳನ್ನು ಪ್ರದರ್ಶಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಿ ಯಾರು ಪ್ರದರ್ಶಿಸುತ್ತಿಲ್ಲ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು , ತಂಬಾಕು ವ್ಯಸನೆಯಿಂದ ಆರೋಗ್ಯ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಂಬಾಕು ನಿಯಂತ್ರಣ ಕಾನೂನು- ಕೊಟ್ಪಾ 2003ರ ಕಾಯ್ದೆಯಂತೆ ಸೆಕ್ಷನ್ 04 ರ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಇದರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಮಾಲೀಕರು ನಾಮಫಲಕಗಳನ್ನು ಪ್ರದರ್ಶಿಸಬೇಕು. ಸೆಕ್ಷನ್ 05 ರ ಅಡಿಯಲ್ಲಿ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ಉತ್ತೇಜನ, ಪ್ರಾಯೋಜಕತೆ ನಿಷೇಧ ಮಾಡಲಾಗಿದೆ. ಇದರ ಅನ್ವಯ ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಅಂಗಡಿಗಳಲ್ಲಿ ತಂಬಾಕು ಜಾಹೀರಾತುಗಳನ್ನು ಬೋರ್ಡ್, ಭಿತ್ತಿ ಪತ್ರ, ಎಲ್ ಇ ಡಿ ಟಿವಿಗಳ ಮೂಲಕ ಪ್ರಚಾರ ಮಾಡುವಂತಿಲ್ಲ, ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಮೂಲಕ ತಂಬಾಕು ಉತ್ಪನ್ನಗಳ ಜಾಹೀರಾತು ಮಾಡುವಂತಿಲ್ಲ. ಸೆಕ್ಷನ್ 6 ರ ಅಡಿಯಲ್ಲಿ ತಂಬಾಕು ಉತ್ಪನ್ನಗಳನ್ನು 18 ವರ್ಷದೊಳಗಿನ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮಾರಾಟ ಮಾಡುವಂತಿಲ್ಲ. ಈ ಕಾನೂನುಗಳನ್ನು ಉಲ್ಲಂಘಿಸಿದಲ್ಲಿ ದಂಡ ಹಾಗೂ ಸೂಕ್ತ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ. ಸೆಕ್ಷನ್ 06 ಬಿ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳ ನೂರು ಅಡಿಯ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಸೆಕ್ಷನ್ 07 ರಲ್ಲಿ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ಶೇ. 85 ರಷ್ಟು ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವಂತಿಲ್ಲ ಎಂದು ಹೇಳಿದರು.

ತಂಬಾಕು ವ್ಯಸನಿಗಳನ್ನು ಹೆಚ್ಚು ಪತ್ತೆ ಮಾಡಿ ಸಮಾಲೋಚನೆ ನಡೆಸಿ, ತಂಬಾಕು ವ್ಯಸನ ಮುಕ್ತರನ್ನಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಿ ಎಂದರಲ್ಲದೆ, ಕಾನೂನು ಪಾಲಿಸದೆ ತಂಬಾಕು ವಸ್ತುಗಳನ್ನು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಅಂತವರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿ ಎಂದು ಹೇಳಿದರು.
ಶಿಕ್ಷಣ ಇಲಾಖೆ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿ ಕಾರ್ಯಕ್ರಮ ಯಶಸ್ವಿಯಾಗಲು ಶ್ರಮಿಸಬೇಕು ಎಂದರು.

*ಸ್ಟಾಪ್ ಟ್ಯೊಬ್ಯಾಕೋ ಮೊಬೈಲ್ ಆಪ್ ಬಳಸಿ*
ತಂಬಾಕು ನಿಯಂತ್ರಿಸಲು ರೂಪುಗೊಂಡಿರುವ ಸ್ಟಾಪ್ ಟ್ಯೊಬ್ಯಾಕೋ ಆಪ್ ಅನ್ನು ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಸಹ ಬಳಸಬಹುದಾಗಿದೆ. ಕಾನೂನು ಬಾಹಿರವಾಗಿ ತಂಬಾಕು ಮಾರಾಟ ಮಾಡುತ್ತಿರುವ ಪ್ರದೇಶದ ಕುರಿತು ಈ ಆಪ್ ಮೂಲಕ ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ. ಮಾಹಿತಿ ನೀಡಿದ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ತಂಬಾಕು ಬಳಕೆಯನ್ನು ನಿಯಂತ್ರಿಸಲು ಸಾರ್ವಜನಿಕರು ಸಹ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನೀಲ್ ಕುಮಾರ್, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ‌.ವಿದ್ಯಾರಾಣಿ.ಪಿ.ಎಸ್, ಜಿಲ್ಲಾ ಅರೋಗ್ಯ ಕಾರ್ಯಕ್ರಮ ಅಧಿಕಾರಿಗಳು, ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

10 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

11 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

19 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago