ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಸೂಲಿಬೆಲೆ ನಿವಾಸಿ ಖಲೀಮ್ ಖಾನ್ (35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಖಲೀಮ್ ಖಾನ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ತಲವಾರ್‌ನಿಂದ ದೇಹದ ವಿವಿಧ ಭಾಗಗಳಿಗೆ ಸುಮಾರು 8 ರಿಂದ 10 ಬಾರಿ ಇರಿದು ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಹತ್ಯೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಮೃತ ಖಲೀಮ್ ಖಾನ್ ಸೂಲಿಬೆಲೆಯಲ್ಲಿ ಹಣ್ಣಿನ ವ್ಯಾಪಾರ ನಡೆಸುತ್ತಿದ್ದು, ರೌಡಿ ಶೀಟರ್ ಆಗಿಯೂ ಗುರುತಿಸಿಕೊಂಡಿದ್ದ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್, ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು,

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!