ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಸೂಲಿಬೆಲೆ ನಿವಾಸಿ ಖಲೀಮ್ ಖಾನ್ (35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಖಲೀಮ್ ಖಾನ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ತಲವಾರ್‌ನಿಂದ ದೇಹದ ವಿವಿಧ ಭಾಗಗಳಿಗೆ ಸುಮಾರು 8 ರಿಂದ 10 ಬಾರಿ ಇರಿದು ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಹತ್ಯೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
ಮೃತ ಖಲೀಮ್ ಖಾನ್ ಸೂಲಿಬೆಲೆಯಲ್ಲಿ ಹಣ್ಣಿನ ವ್ಯಾಪಾರ ನಡೆಸುತ್ತಿದ್ದು, ರೌಡಿ ಶೀಟರ್ ಆಗಿಯೂ ಗುರುತಿಸಿಕೊಂಡಿದ್ದ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್, ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು,
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…