ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಭಗೀರಥ ಜಯಂತೋತ್ಸವವನ್ನು ತಾಲೂಕು ಕಚೇರಿಯ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಗೀರಥ ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್.ಡಿ.ಉಪ್ಪಾರ್ ಮಾತನಾಡುತ್ತಾ… ಭಗೀರಥ ಮಹರ್ಷಿ ತನ್ನ ಕಠಿಣ ತಪಸ್ಸಿನಿಂದ ಗಂಗೆಯನ್ನು ಭುವಿಗೆ ತಂದ ಮಹಾತ್ಮರ ಸಮುದಾಯದಲ್ಲಿ ಜನಿಸಿದ ನಾವೇ ಧನ್ಯರು. ಭೂಮಿಯ ಮೇಲಿನ ಕೋಟ್ಯಾಂತರ ಜೀವರಾಶಿಗಳಿಗೆ ಅತ್ಯಗತ್ಯವಾದ ಜೀವಜಲ ತಂದುಕೊಟ್ಟಂತಹ ಮಹರ್ಷಿ ಶ್ರೀ ಭಗೀರಥರ ಜಯಂತೋತ್ಸವನ್ನು ರಾಜ್ಯಾದ್ಯಂತ ಆಚರಿಸುವ ಭಾಗ್ಯ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಆಚರಿಸುವ ಅವಕಾಶ ಕಲ್ಪಿಸಿಕೊಟ್ಟಿದೆ ಎಂದರು.
ತಾಲ್ಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್ ಮಾತನಾಡಿ, ರಾಜ್ಯಾದ್ಯಂತ ನೆಲೆಸಿರುವ ಉಪ್ಪಾರ ಸಮುದಾಯ ಶಿಕ್ಷಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಂದುವರೆಯಬೇಕಿದೆ. ಪೋಷಕರು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವುದರೊಂದಿಗೆ ಸರ್ಕಾರಿ ಅಧಿಕಾರಿಗಳನ್ನಾಗಿ ರೂಪಿಸಿ ಸಮಾಜದಲ್ಲಿ ಗೌರವವನ್ನು ಪಡೆದು ಸಮುದಾಯದ ಏಳ್ಗೆಗೆ ಮುಂದಾಗಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಘಟಕ ಅಧ್ಯಕ್ಷ ಕೆ.ಪ್ರಕಾಶ್, ತಾಲ್ಲೂಕು ಅಧ್ಯಕ್ಷ ಪಿ.ಎಂ.ಪ್ರಕಾಶ್ ಕುಮಾರ್, ಉಪಾಧ್ಯಕ್ಷರಾದ ಲಕ್ಷಿನಾರಾಯಣ್, ಶ್ರೀನಿವಾಸ ಬಾಬು, ಚಂದ್ರಶೇಖರ್, ಕೃಷ್ಣಮೂರ್ತಿ, ರಾಮರಾಜ್, ಪಂಚಾಯ್ತಿ ಸದಸ್ಯರಾದ ಉಮೇಶ್, ಸುರೇಶ್ ಸೇರಿದಂತೆ ಸಮುದಾಯದ ಮುಖಂಡರು ಹಾಜರಿದ್ದರು.
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…