ರಾಜ್ಯದಲ್ಲಿ ಶಾಂತಿಯುತವಾಗಿ ಬಂದ್ ನಡೆದಿದ್ದು, ಇದಕ್ಕೆ ಸಹಕರಿಸಿದ ಸಾರ್ವಜನಿಕರಿಗೆ, ಸಂಘ ಸಂಸ್ಥೆಗಳಿಗೆ, ಅಭಿನಂದನೆಗಳು. ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳು, ಅಡ್ವೊಕೇಟ್ ಜನರಲ್ ಅವರೊಂದಿಗಿನ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಹೇಳಿದರು.
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಮಾಜಿ ಅಡ್ವೊಕೇಟ್ ಜನರಲ್‌ಗಳು ಸಭೆಯಲ್ಲಿ ಭಾಗವಹಿಸಿದ್ದರು. ಅವರ ಅನುಭವದ ಆಧಾರದ ಮೇಲೆ ಕೆಲವು ಅಭಿಪ್ರಾಯ, ಸಲಹೆಗಳನ್ನು ನೀಡಿದ್ದಾರೆ. ಅವರ ಸಲಹೆಗಳನ್ನು ಪರಿಗಣಿಸಿ ಮುಂದಿನ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.
ಮುಖ್ಯವಾಗಿ ರಾಜ್ಯದ ನೀರಾವರಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪರಿಣಿತರ ಸಲಹಾ ಸಮಿತಿಯನ್ನು ರಚಿಸಿ, ಡಾಟಾ ಸಂಗ್ರಹ, ಸಲಹೆ ನೀಡುವ ಕಾರ್ಯವನ್ನು ಮಾಡಬೇಕು. ಅಂತರರಾಜ್ಯ ಜಲವಿವಾದಗಳ ಬಗ್ಗೆ ಸರ್ಕಾರಕ್ಕೆ ಸಲಹೆ ಸೂಚನೆ, ಕಾನೂನು ತಂಡಕ್ಕೆ ಮಾಹಿತಿ ನೀಡಲು ಕೂಡ ಸಮಿತಿ ಅಗತ್ಯ ಎನ್ನುವ ಸಲಹೆ ಬಂದಿದೆ. ಇದರಂತೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವ ಬಗ್ಗೆ ಎರಡೂ ಸಮಿತಿಗಳ ಮುಂದೆ ನಮ್ಮಲ್ಲಿ ನೀರು ಇಲ್ಲ ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ಹಳೇ ಬಾಕಿ ಸರಿದೂಗಿಸಬೇಕು ಎಂದು 3,000 ಕ್ಯೂಸೆಕ್ ನೀರು ಬಿಡಲು ಆದೇಶಿಸಿದ್ದಾರೆ. ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಹಾಕುವಂತೆಯೂ ಸೂಚಿಸಿದ್ದಾರೆ ಎಂದರು.
ಮೇಕೆದಾಟು ಯೋಜನೆಯ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಪ್ರಸ್ತಾಪ ಮಾಡಬೇಕು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆ ಇಲ್ಲ. ಹಾಗಾಗಿ ತೀವ್ರವಾಗಿ ಇದನ್ನು ಮಂಡಿಸಬೇಕು ಎಂದು ಸಲಹೆ ನೀಡಿದ್ದಾರೆ. ಮೇಕೆದಾಟು ಬ್ಯಾಲೆನ್ಸಿಂಗ್ ಜಲಾಶಯವಾಗಿ 67 ಟಿಎಂಸಿ ನೀರು ಸಂಗ್ರಹ ಮಾಡುವ ಸಾಮರ್ಥ್ಯ ಹೊಂದಲಿದೆ. ವಿದ್ಯುತ್ ಹಾಗೂ ಕುಡಿಯುವ ನೀರಿಗೆ ಅದನ್ನು ಬಳಸಲಾಗುವುದು. ಸಂಕಷ್ಟ ಬಂದಾಗ ತಮಿಳುನಾಡಿಗೆ ನೀರು ಬಿಡಬಹುದು ಎಂದು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…