ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಮಲೈ ಅವರು ರಾಜೀನಾಮೆ ನೀಡಿರುವ ಮಾಹಿತಿ ಒದಗಿಬಂದಿದೆ.
ಬಿಜೆಪಿ ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ಕೆ.ಅಣ್ಣಮಲೈ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಎರಡು ದಿನಗಳ ಹಿಂದೆಯೇ ಕೆ.ಅಣ್ಣಮಲೈ ಅವರು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ರಾಜಕೀಯ ಮೂಲಗಳು ಹೇಳಿದ್ದವು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಣ್ಣಾಮಲೈ ಅವರಿಗೆ ಬಿಜೆಪಿ ಈ ನಿರ್ಧಾರವನ್ನು ತಿಳಿಸಲಾಗಿತ್ತು. ಅದರಂತೆ ಈಗ ಕೆ.ಅಣ್ಣಮಲೈ ಅವರು ಸ್ಥಾನದಿಂದ ಕೆಳಗಿಳಿದಿದ್ದಾರೆ ಎನ್ನಲಾಗಿದೆ.
ರಾಜೀನಾಮೆ ಬಳಿಕ ಮಾತನಾಡಿದ ಕೆ.ಅಣ್ಣಮಲೈ ಅವರು, ಈಗ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ನಾನಲ್ಲ. ಆದರೆ ತಮಿಳುನಾಡಿನಲ್ಲಿ ಜೀವ ಕೊಟ್ಟು ಬಿಜೆಪಿ ಪಕ್ಷವನ್ನು ಬೆಳೆಸಿದ್ದೇನೆ. ಮುಂದಿನ ನೂತನ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಯಾರನ್ನೂ ಸೂಚಿಸಿಲ್ಲ. ಈ ಮಣ್ಣನ್ನ ಬಿಟ್ಟು ನಾನು ಎಲ್ಲಿಗೂ ಹೋಗಲ್ಲ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷರ ರೇಸ್ನಲ್ಲಿ ನಾನು ಇಲ್ಲ. ಈ ಪಕ್ಷ ಚೆನ್ನಾಗಿರಬೇಕು. ಏಕೆಂದರೆ ಈ ಪಕ್ಷದಲ್ಲಿ ಎಲ್ಲ ಒಳ್ಳೆಯವರೇ ಇದ್ದಾರೆ. ಈ ಪಕ್ಷಕ್ಕಾಗಿ ಸಾಕಷ್ಟು ಜನ ಉಸಿರು ಕೊಟ್ಟಿದ್ದಾರೆ. ಬಿಜೆಪಿ ನೂತನ ಅಧ್ಯಕ್ಷರನ್ನ ಆಯ್ಕೆ ಮಾಡುವಾಗ ಇನ್ನಷ್ಟು ಮಾತನಾಡುತ್ತೇನೆ ಎಂದು ಅಣ್ಣಮಲೈ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕರು ಹಾಗೂ ಅವರ ಬೆಂಬಲಿಗರು ವೈಯಕ್ತಿಕ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ಹೊಸಹಳ್ಳಿ–ಕೊಟ್ಟಿಗೆಮಾಚೇನಹಳ್ಳಿ ಮಾರ್ಗದಲ್ಲಿ ಸಂಚರಿಸುವ ಸರ್ಕಾರಿ ಬಸ್‌ಗಳು ಪದೇಪದೇ ಮಾರ್ಗಮಧ್ಯದಲ್ಲೇ ಕೆಟ್ಟು ನಿಲ್ಲುವ ಸಮಸ್ಯೆ ಮುಂದುವರಿದಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಇಂದು…
ಬೆಂಗಳೂರು ಗ್ರಾಮಾಂತರ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿರುವ 23ನೇ ಕಂತಿನ ಹಣ ಪಡೆಯಲು…
ದೊಡ್ಡಬಳ್ಳಾಪುರ: ಖಾಸಗಿ ಕಾಲೇಜಿನ ಸಮೀಪದ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದರೆಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ…
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಸರಣಿ ಕಾರ್ಯಾಚರಣೆಯಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ…
ಪರಿವರ್ತನೆಯ ಹಾದಿಯಲ್ಲಿ........ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ನಡತೆ ಕಲಿಸಬೇಕು ಎಂಬುದು ಆಧುನಿಕ ಕಾಲದ ಬಹುದೊಡ್ಡ ಆಶಯ. ಮಾಧ್ಯಮಗಳಲ್ಲೂ, ಅನೇಕ…