ತರಕಾರಿ ತರಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ: ಸಹೋದ್ಯೋಗಿಗಳಿಂದಲೇ ಕೊಲೆಯಾಗಿರುವ ಶಂಕೆ

ಮೂರು ದಿನಗಳ ಹಿಂದೆ ತರಕಾರಿ ತರಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಪತಾಂಜಲಿ ಸ್ಟೋರ್ ಸಮೀಪದ ಕೋಣೆಯೊಂದರಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ನಿವಾಸಿ ದೀಪಾ(40), ಮೃತ ದುರ್ದೈವಿ. ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ದೀಪಾಳ ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಸಹೋದ್ಯೋಗಿಗಳಿಂದಲೇ ಗೃಹಿಣಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಸಹೋದ್ಯೋಗಿ ದಿವಾಕರ್ ವಾಸವಿದ್ದ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿರುವುದರಿಂದ ಹಲವು ಅನುಮಾನಗಳನ್ನ ಹುಟ್ಟುಹಾಕಿದೆ.

ಸದ್ಯ ಘಟನೆ ನಂತರ ದೀಪಾ ಸಹೋದ್ಯೋಗಿಗಳಾದ ದಿವಾಕರ್ ಹಾಗೂ ಸುರೇಶ್ ತಲೆಮರೆಸಿಕೊಂಡಿದ್ದಾರೆ.

ಬೇಕರಿಯೊಂದರಲ್ಲಿ ದೀಪಾ, ದಿವಾಕರ್ ಹಾಗೂ ಸುರೇಶ್ ಒಟ್ಟಿಗೆ ಕೆಲಸ ಮಾಡುತ್ತಿದ್ದರು.

ಸುರೇಶ್ ಹಾಗೂ ದಿವಾಕರ್ ಜೊತೆ ದೀಪಾ ಹಣಕಾಸಿನ ವ್ಯವಹಾರ ಮಾಡಿದ್ದರು. ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಮೂಡಿ ಕೊಲೆಯಾಗಿರುವ ಶಂಕೆವ್ಯಕ್ತವಾಗಿದೆ.

ಸದ್ಯ ಚಿಕ್ಕಬಳ್ಳಾಪುರ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

3 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

5 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

13 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

18 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

21 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

22 hours ago