ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು.
ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಇದಕ್ಕಾಗಿ ನೀವು ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮ ಸರ್ಕಾರ ಸಾಲ ಮಾಡಿದೆ ಎಂದು ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ವಿತ್ತೀಯ ಹೊಣೆಗಾರಿಕಾ ಕಾಯ್ದೆಯ ಮಾನದಂಡಗಳನ್ನು ಮೀರಿ ನಾವು ಸಾಲ ಮಾಡಿಲ್ಲ. ಈ ಸತ್ಯವನ್ನು ಬಿಜೆಪಿ ಹೇಳುತ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ಬರಲಿಲ್ಲ. ಜೊತೆಗೆ ಜಿಎಸ್‌ಟಿ ಮೂಲಕ ನಮಗೆ ಬರಬೇಕಿದ್ದ ತೆರಿಗೆ ಕೇಂದ್ರದ ಅವೈಜ್ಞಾನಿಕ ನೀತಿಯಿಂದಾಗಿ 10 ಸಾವಿರ ಕೋಟಿ ಕಡಿಮೆಯಾಯಿತು. ಆದರೂ ನಾವು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿಲ್ಲ. ಜೊತೆಗೆ ಅಭಿವೃದ್ಧಿ ಕೆಲಸಗಳನ್ನೂ ಮುಂದುವರೆಸಿದ್ದೇವೆ. ಹೀಗಾಗಿ ನಮ್ಮದು ನುಡಿದಂತೆ ನಡೆದ ಪಕ್ಷ ಎಂದರು.

ಅಧಿಕಾರ ಇದ್ದಾಗ ಕೆಲಸ ಮಾಡದೆ ಈ ಸುಳ್ಳು ಹೇಳಿಕೊಂಡು ತಿರುಗುತ್ತಿರುವ ಬಿಜೆಪಿ ಗೆ ನಿಮ್ಮ ಮತ ಪಡೆಯುವ ಯೋಗ್ಯತೆ ಇಲ್ಲ. ಯೋಗ್ಯತೆ ಇಲ್ಲದವರಿಗೆ ನಿಮ್ಮ ಮತ ಕೊಡಬೇಡಿ ಎಂದು ಹೇಳಿದ್ದಾರೆ.

ಚನ್ನಪಟ್ಟಣ, ಶಿಗ್ಗಾಂವ್, ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಯ ಎಲ್ಲಾ ಅಪಪ್ರಚಾರದ ನಡುವೆಯೂ ಗೆದ್ದಿದ್ದು ಕಾಂಗ್ರೆಸ್ ಪಕ್ಷವೇ. ಈ ಚುನಾವಣೆಯಲ್ಲೂ ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. ಜೊತೆಗೆ 2028ಕ್ಕೂ ನಾವೇ ಗೆದ್ದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಲು ಸೋಮಣ್ಣ ನಮ್ಮ ಪಕ್ಷದ ಹೈಕಮಾಂಡ್ ಅಲ್ಲ.
ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ. ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ ಎಂದಲ್ಲ, ಕ್ಷೇತ್ರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ‌ ಅಷ್ಟೆ ಎಂದರು.

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲು ನನಗೆ ಇಷ್ಟವಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಪಕ್ಷದಿಂದ ಉಚ್ಛಾಟಿಸಲ್ಪಟ್ಟಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಗೋಗರೆದು ಕರೆ ತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ, ಕರ್ನಾಟಕದಲ್ಲಿ ಬಿಜೆಪಿ ಎಂಥಾ ಹೀನಾಯ ಸ್ಥಿತಿಯಲ್ಲಿದೆ ಎಂಬುದಕ್ಕಿದು ಸಾಕ್ಷಿ ಎಂದರು.

ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಪೂರೈಕೆ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದು ಅವರ ಕರ್ತವ್ಯ. ರಾಜ್ಯ ಸರ್ಕಾರ ವಿತರಣೆ ಮಾಡುತ್ತದೆಯಷ್ಟೇ. ಆಟೋ ಚಾಲಕರು ಆಹಾರ ಸಚಿವರ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳುತ್ತಿದ್ದಾರೆ, ಆದರೆ ಇವರು ನಿಜವಾಗಿ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು ಎಂದರು.

ರಾಜ್ಯದ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂಬ ಯತ್ನಾಳ್ ಅವರ ಮಾತು ದ್ವೇಷ ರಾಜಕೀಯದಿಂದ ಕೂಡಿದ್ದು. ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ? ಅವರ ಜನಸಂಖ್ಯೆ 14% ರಷ್ಟಿದ್ದು ಎಲ್ಲರಿಗೂ ಅನುದಾನ ನೀಡಿದಂತೆ ಅವರಿಗೂ ನೀಡಲಾಗಿದೆ ಎಂದರು.

Ramesh Babu

Journalist

Recent Posts

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

3 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

5 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

10 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

13 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

1 day ago