ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು. ಅಧಿಕಾರಿಗಳು ಒಳ್ಳೆ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಈ ಜವಾಬ್ದಾರಿಯನ್ನು ನಿರ್ವಹಿಸಿ, ಮಧ್ಯವರ್ತಿಗಳನ್ನು ನಿಮ್ಮ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು.
ನಾವು ನೀವು ರಾಜ್ಯದ 7 ಕೋಟಿ ಜನರ ಹಿತ ಕಾಯುವುದಕ್ಕಾಗಿ ಇದ್ದೇವೆ. ರಾಜಕಾರಣಿಗಳು ಜನರಿಂದ ರಿನೀವಲ್ ಆದರೆ ಮಾತ್ರ ಐದು ವರ್ಷದ ಬಳಿಕವೂ ಜನ ಸೇವೆಯಲ್ಲಿ ಇರ್ತಾರೆ. ಆದರೆ ಕೆಎಎಸ್ ಅಧಿಕಾರಿಗಳು 30 ವರ್ಷಗಳ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತಾರೆ. ಆದ್ದರಿಂದ ಹೆಚ್ಚು ಜನಪರವಾಗಿ ಇದ್ದು ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು ಎಂದರು.
ರಾಜಕಾರಣಗಳಿಗೆ, ಅಧಿಕಾರಿಗಳಿಗೆ ಜನರು ಸವಲತ್ತುಗಳನ್ನು ಒದಗಿಸಿದ್ದಾರೆ. ಜನರ ತೆರಿಗೆ ಹಣದಲ್ಲಿ ನಮಗೆ ಸವಲತ್ತುಗಳು ಸಿಕ್ಕಿವೆ. ಸುಗಮ ಜನಪರ ಆಡಳಿತ ಕೊಡಲಿ ಎನ್ನುವ ಕಾರಣದಿಂದ ಜನರಿಂದ ನಮಗೆ ಸವಲತ್ತು ಸಿಕ್ಕಿವೆ. ಜನರ ಅಭ್ಯದಯ ನಮ್ಮ ಗುರಿ ಆಗಬೇಕು. ಬಲಾಡ್ಯರು ದುರ್ಬಲರ ಮೇಲೆ ದೌರ್ಜನ್ಯ ನಡೆಸದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸಿ. ಸಣ್ಣ ಪುಟ್ಟ ರೆವಿನ್ಯೂ ಸಮಸ್ಯೆಗಳಿಗೆ ಜನರು ನನ್ನ ಬಳಿಗೆ ಬರುತ್ತಾರೆ ಎಂದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು.
ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಶಿವಸ್ವಾಮಿ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಘದ ಉಪಾಧ್ಯಕ್ಷರಾದ ಚನ್ನಬಸಪ್ಪ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…