Categories: ರಾಜ್ಯ

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ- ಮಧ್ಯವರ್ತಿಗಳನ್ನ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು- ಸಿಎಂ ಸಿದ್ದರಾಮಯ್ಯ

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು. ಅಧಿಕಾರಿಗಳು ಒಳ್ಳೆ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಈ ಜವಾಬ್ದಾರಿಯನ್ನು ನಿರ್ವಹಿಸಿ, ಮಧ್ಯವರ್ತಿಗಳನ್ನು ನಿಮ್ಮ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಹೇಳಿದರು.

ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು.

ನಾವು ನೀವು ರಾಜ್ಯದ 7 ಕೋಟಿ ಜನರ ಹಿತ ಕಾಯುವುದಕ್ಕಾಗಿ ಇದ್ದೇವೆ. ರಾಜಕಾರಣಿಗಳು ಜನರಿಂದ ರಿನೀವಲ್ ಆದರೆ ಮಾತ್ರ ಐದು ವರ್ಷದ ಬಳಿಕವೂ ಜನ ಸೇವೆಯಲ್ಲಿ ಇರ್ತಾರೆ. ಆದರೆ ಕೆಎಎಸ್ ಅಧಿಕಾರಿಗಳು 30 ವರ್ಷಗಳ‌ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತಾರೆ. ಆದ್ದರಿಂದ ಹೆಚ್ಚು ಜನಪರವಾಗಿ ಇದ್ದು ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು ಎಂದರು.

ರಾಜಕಾರಣಗಳಿಗೆ, ಅಧಿಕಾರಿಗಳಿಗೆ ಜನರು ಸವಲತ್ತುಗಳನ್ನು ಒದಗಿಸಿದ್ದಾರೆ. ಜನರ ತೆರಿಗೆ ಹಣದಲ್ಲಿ ನಮಗೆ ಸವಲತ್ತುಗಳು ಸಿಕ್ಕಿವೆ. ಸುಗಮ ಜನಪರ ಆಡಳಿತ ಕೊಡಲಿ ಎನ್ನುವ ಕಾರಣದಿಂದ ಜನರಿಂದ ನಮಗೆ ಸವಲತ್ತು ಸಿಕ್ಕಿವೆ. ಜನರ ಅಭ್ಯದಯ ನಮ್ಮ ಗುರಿ ಆಗಬೇಕು. ಬಲಾಡ್ಯರು ದುರ್ಬಲರ ಮೇಲೆ ದೌರ್ಜನ್ಯ ನಡೆಸದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸಿ. ಸಣ್ಣ ಪುಟ್ಟ ರೆವಿನ್ಯೂ ಸಮಸ್ಯೆಗಳಿಗೆ ಜನರು ನನ್ನ ಬಳಿಗೆ ಬರುತ್ತಾರೆ ಎಂದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು.

ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಶಿವಸ್ವಾಮಿ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಘದ ಉಪಾಧ್ಯಕ್ಷರಾದ ಚನ್ನಬಸಪ್ಪ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

4 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

9 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

12 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

23 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago