Categories: ಉಡುಪಿ

ತಾಯಿಯ ಆಸೆಯನ್ನು ಈಡೇರಿಸಿದ ಯಂಗ್ ಟೈಗರ್ ಜೂನಿಯರ್ ಎನ್ ಟಿಆರ್(Jr NTR): ತಾಯಿಯ ಆಸೆ ಏನು..? ಇಂದು ಅವರು ಯಾವ ಮಠಕ್ಕೆ ಭೇಟಿ‌ ಕೊಟ್ಟಿದ್ದರು…? ಇಲ್ಲಿದೆ ಮಾಹಿತಿ…

ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್‌ಟಿಆರ್ (Jr NTR) ಅವರು ತಮ್ಮ ತಾಯಿ ಶಾಲಿನಿ ನಂದಾಮುರಿ ಅವರ ಜೊತೆ ಉಡುಪಿಯ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು.

ನಂತರ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ, ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿದರು.

ಶಾಲಿನಿ ನಂದಮುರಿ ಅವರು 40 ವರ್ಷಗಳ ಹಿಂದೆ ಪುತ್ರನನ್ನು ಉಡುಪಿ ಶ್ರೀ ಕೃಷ್ಣ ದೇವರ ದರ್ಶನಕ್ಕೆ ಕರೆದುಕೊಂಡು ಬರಬೇಕು ಎಂಬ ಕನಸು ಕಂಡಿದ್ದರಂತೆ. ಇಂದು ಆ ಆಸೆ ಈಡೇರಿದೆ. ಜೂನಿಯರ್ ಎನ್‌ಟಿಆರ್ ತನ್ನ ತಾಯಿ ಶಾಲಿನಿ ಅವರೊಂದಿಗೆ ತನ್ನ ತವರು ಕುಂದಾಪುರಕ್ಕೆ ತೆರಳಿದ್ದರು. ಬಳಿಕ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು

ಈ ಬಗ್ಗೆ ಎನ್‌ಟಿಆರ್ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದರ್ಶನ ಪಡೆಯಲು ಹುಟ್ಟೂರು ಕುಂದಾಪುರಕ್ಕೆ ನನ್ನನ್ನು ಕರೆತರುವ ನನ್ನ ತಾಯಿಯ ಕನಸು ಕೊನೆಗೂ ನನಸಾಗಿದೆ!  ಸೆಪ್ಟೆಂಬರ್ 2 ರಂದು ಅವರ ಜನ್ಮದಿನದ ಮೊದಲು ಅದನ್ನು ನೆರವೇರಿಸುವುದು ನಾನು ಅವಳಿಗೆ ನೀಡಬಹುದಾದ ಅತ್ಯುತ್ತಮ ಕೊಡುಗೆಯಾಗಿದೆ ಎಂದು ಎನ್‌ಟಿಆರ್ ಬರೆದಿದ್ದಾರೆ. ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ನಟ ರಿಷಬ್ ಶೆಟ್ಟಿ ಕೂಡ ಅವರೊಂದಿಗೆ ಇದ್ದಾರೆ. ಈ ಫೋಟೋಗಳು ಇದೀಗ ವೈರಲ್ ಆಗಿವೆ.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

5 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

6 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

7 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

8 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

8 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

10 hours ago