ರೈಲಿಗೆ ತಲೆಕೊಟ್ಟು ಅಣ್ಣ-ತಂಗಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣ ಸಮೀಪ ನಡೆದಿದೆ.
ಮೃತ ದುರ್ದೈವಿಗಳನ್ನು ಶಿಡ್ಲಘಟ್ಟ ನಗರದ ಪ್ರೇಮನಗರದ ನಿವಾಸಿಗಳಾದ ಅಣ್ಣ ಪ್ರಭು(30) ತಂಗಿ ಶಿಲ್ಪ (28) ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ರೈಲ್ವೆ ಹಳಿಗಳ ಮೇಲೆ ರುಂಡ- ಮುಂಡ ಬೇರೆ ಬೇರೆಯಾಗಿ ಬೇರ್ಪಟ್ಟ ಸ್ಥಿತಿಯಲ್ಲಿ ಎರಡು ಮೃತ ದೇಹಗಳು ಪತ್ತೆಯಾಗಿದ್ದು, ನಗರ ನಿವಾಸಿಗಳನ್ನು ಭಯಭೀತರನ್ನಾಗಿಸಿದೆ.
ಮೊದಲಿಗೆ ಯಾರೋ ಪ್ರೇಮಿಗಳು ಇರಬಹುದು ಎಂದು ಹೇಳಲಾಗಿತ್ತು. ಆದರೆ, ಅವರು ಒಡಹುಟ್ಟಿದವರು ಎಂದು ತಿಳಿದು ಬಂದಿದ್ದು, ಎಲ್ಲರ ಕಣ್ಣಲ್ಲಿ ನೀರು ತರಿಸಿದೆ.
ಇನ್ನೂ ಕಳೆದ ರಾತ್ರಿ ರೈಲಿಗೆ ತಲೆಗೆ ಕೊಟ್ಟು ಇಬ್ಬರು ಜೀವ ಕಳೆದುಕೊಂಡಿದ್ದು, ಇಂದು ಬೆಳಗ್ಗೆ ರೈಲ್ವೆ ಸಿಬ್ಬಂದಿ ಹಾಗೂ ಸಾರ್ವಜನಿಕರು ವಾಕಿಂಗ್ ಹೋದಂತದ ಸಂದರ್ಭದಲ್ಲಿ ಎರಡು ಮೃತ ದೇಹಗಳು ರೈಲು ಹಳಿಗಳ ಮೇಲೆ ಕಂಡುಬಂದಿದೆ.
ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ಮಾಹಿತಿಯನ್ನು ಮುಟ್ಟಿಸಿದ್ದಾರೆ. ಇನ್ನೂ ಮೃತ ಅಕ್ಕ-ತಮ್ಮ ಕಳೆದ ಎರಡು ತಿಂಗಳ ಹಿಂದೆ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ಇದರಿಂದ ಸಾಕಷ್ಟು ಮನನೊಂದಿದ್ದ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು ನಿಂದ-ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…