Categories: ಬೆಳಗಾವಿ

ತಾಯಿ ಜೊತೆ ಅನೈತಿಕ ಸಂಬಂಧ…ನಡು ರಸ್ತೆಯಲ್ಲಿ ಕೊಂದ ಮಗ…ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದ ಹಂತಕ…

ತಾಯಿ ಜೊತೆ ಅಕ್ರಮ ಸಂಭಂಧ ಇಟ್ಟುಕೊಂಡಿದ್ದ ಪ್ರಿಯಕರನನ್ನ ಮಗ ನಡು ರಸ್ತೆಯಲ್ಲಿ ಕೊಚ್ಚಿ ಕೊಂದು ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದು ಶರಣಾದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಬರೋಬ್ಬರಿ 16 ಬಾರಿ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿದ್ದಾನೆ.

ಬಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51) ಕೊಲೆಯಾದ ವ್ಯಕ್ತಿ.

ಈರಯ್ಯ ಮಠಪತಿ ಕೊಲೆ ಆರೋಪಿ. ನಿನ್ನೆ ಸಂಜೆ ರಸ್ತೆ ಮಧ್ಯೆ ಬರುತ್ತಿದ್ದ ಬಸಪ್ಪ ಹೊಸಮನಿಯನ್ನ ತಡೆದು ಹತ್ಯೆಗೈದು ಬಳಿಕ ಪೊಲೀಸರಿಗೆ ಕರೆ ಮಾಡಿ‌ ಕೊಲೆ ಮಾಡಿದ್ದಾಗಿ ಈರಯ್ಯ ಮಾಹಿತಿ ನೀಡಿದ್ದಾನೆ.

ಪೊಲೀಸರು ಬರುವವರೆಗೂ ರಸ್ತೆ ಮಧ್ಯೆ ಶವದ ಬೆನ್ನ ಮೇಲೆ ಕಾಲಿಟ್ಟು ನಿಂತಿದ್ದ ಆರೋಪಿ ಈರಯ್ಯನನ್ನ ಸವದತ್ತಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹತ್ತು ವರ್ಷದ ಹಿಂದೆ ಈರಯ್ಯ ತಾಯಿ ಜೊತೆಗೆ ಬಸಪ್ಪ ಓಡಿ ಹೋಗಿದ್ದ. ಮತ್ತೆ ಗ್ರಾಮಕ್ಕೆ ವಾಪಾಸ್ ಬಂದಿದ್ದ. ಇದೇ ದ್ವೇಷ ಇಟ್ಟುಕೊಂಡು ಸಾರ್ವಜನಿಕವಾಗಿ ಹತ್ಯೆ ಮಾಡಿ ಈರಯ್ಯ ಅಟ್ಟಹಾಸ ಮೆರೆದಿದ್ದಾನೆ.

ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

3 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

3 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

6 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

8 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

10 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

10 hours ago