ತಾಲೂಕಿನಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗಳು ಮೀತಿ ಮೀರುತ್ತಿರುವ ಆರೋಪದ ಬೆನ್ನಲ್ಲೆ ಪೊಲೀಸರು ರೀಫಿಲ್ಲಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಶನಿವಾರ ರಾತ್ರಿ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ರವಿ ಅವರ ನೇತೃತ್ವದಲ್ಲಿ, ನಗರ ಠಾಣಾ ಇನ್ಸ್ಪೆಕ್ಟರ್ ದಯಾನಂದ್, ಗ್ರಾಮಾಂತರ ಠಾಣಾ ಸಾಧಿಕ್ ಪಾಷಾ ಹಾಗೂ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ.
ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್, ರೀಫಿಲ್ಲಿಂಗ್ ಸಾಧನಗಳು ಐದು ವಾಹನಗಳು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಗರದ ಹೊರವಲಯದಲ್ಲಿರುವ ಕೊಡಿಗೇಹಳ್ಳಿ ಗ್ರಾಮದ ಹಿಂಭಾಗ ಹಾದು ಹೋಗಿರುವ ಹೆದ್ದಾರಿ ಪಕ್ಕದಲ್ಲಿರುವ ತೋಟದ ಗೋಡೌನ್ ನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು ಮಾಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಲಾಗಿದೆ.
ದಾಳಿಯ ಸಂದರ್ಭದಲ್ಲಿ ಅಕ್ರಮವಾಗಿ ಗೃಹಬಳಕೆ ಸಿಲಿಂಡರ್ ನಿಂದ ವಾಣಿಜ್ಯ ಬಳಕೆ ಸಿಲಿಂಡರ್ ಗಳಿಗೆ ರೀಫಿಲ್ಲಿಂಗ್ ಮಾಡಲಾಗುತ್ತಿತ್ತು ಎನ್ನಲಾಗಿದೆ.
ದಾಳಿಯ ವೇಳೆ 400 ಕ್ಕೂ ಹೆಚ್ಚು ಸಿಲಿಂಡರ್, ರೀಫಿಲ್ಲಿಂಗ್ ಮಾಡಲು ಬಳಸುವ ಸಾಧನಗಳು, 5 ವಾಹನಗಳು ಪತ್ತೆಯಾಗಿವೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ 10 ಮಂದಿ ಕೆಲಸ ಮಾಡುತ್ತಿದ್ದು, ಪೊಲೀಸರ ಕಂಡು ಕೆಲವರು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ದಾಳಿ ನಡೆದಿದೆ.