ತಾಲೂಕಿನಲ್ಲಿ ಕುಂಠಿತಗೊಂಡಿರೋ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಚಿವರಲ್ಲಿ ಮನವಿ- ಜಿಲ್ಲಾ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ

 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕುಗಳ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 207 ಕಾಮಾಗಾರಿ ನಡೆಯುತ್ತಿದ್ದು, ಕಾಮಗಾರಿ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಬೀರಸಂದ್ರದ ಜಿಲ್ಲಾಡಳಿತವ ಭವನದಲ್ಲಿ ಈ‌ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಲು ಬಂದ ಸಚಿವರು ಆತ್ಮೀಯವಾಗಿ ಬರ ಮಾಡಿಕೊಂಡ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಎಸ್ ಟಿ‌ ಘಟಕದ ಮುಖಂಡರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ತಾಲೂಕಿನಲ್ಲಿ ಕುಂಠಿತಗೊಂಡಿರುವ ಲೋಕೋಪಯೋಗಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು. ಬೆಂಗಳೂರಿನಿಂದ ನಂದಿಬೆಟ್ಟಕ್ಕೆ ಹೋಗುವವರು ಹೆಚ್ಚಿನದಾಗಿ ಕುಂದಾಣ ವೃತ್ತ, ಚಪ್ಪರದಕಲ್ಲು, ಅರುವನಹಳ್ಳಿ, ರಾಮನಾಥಪುರ, ರಬ್ಬನಹಳ್ಳಿ, ಹೆಗ್ಗಡಿಹಳ್ಳಿ ರಸ್ತೆಗಳನ್ನು ಬಳಸುತ್ತಿರುವುದರಿಂದ ರಸ್ತೆ ಹಾಳಾಗಿ, ವಾಹನ ದಟ್ಟಣೆ ಹೆಚ್ಚಾಗಿದೆ, ಹಳ್ಳಿಗರಿಗೆ ತೀವ್ರ ತೊಂದರೆ ಆಗಿದೆ. ಇದರಿಂದ ರಸ್ತೆ ಅಗಲೀಕರಣ, ರಸ್ತೆ ದುರಸ್ತಿ ಮಾಡುವಂತೆ ಎಂದು ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದರು.

ದಂಡುದಾಸ ಕೊಡಿಗೆಹಳ್ಳಿಯಿಂದ ಮೆಳೇಕೋಟೆ ರಸ್ತೆ, ಬೀಡಿಗೆರೆ ಗೇಟ್ ಯಿಂದ ದಂಡುದಾಸ ಕೊಡಿಗೆಹಳ್ಳಿವರೆಗಿನ ರಸ್ತೆಗಳಿಗೆ ಜಲ್ಲಿಕಲ್ಲು ಹಾಕಿ ಹಾಗೇ ಬಿಡಲಾಗಿದೆ ಆ ರಸ್ತೆಗಳಿಗೆ ಡಾಂಬರೀಕರಣ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಮನವಿ ಮಾಡಲಾಗಿದೆ ಎಂದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ‌.ಹೆಚ್‌.ಮುನಿಯಪ್ಪ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಜಿಲ್ಲಾಧಿಕಾರಿ ಡಾ.ಎನ್.ಶಿವಂಶಕರ್, ಅಪರ ಜಿಲ್ಲಾಧಿಕಾರಿ, ತಾ.ಪಂ ಇಒ, ಸುಬ್ರಮಣಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

1 hour ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

3 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

3 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

5 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

6 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

10 hours ago